ಸರ್ವಪಲ್ಲಿ ರಾಧಾಕೃಷ್ಣನ್ ಇಂದಿಗೂ ಮಾದರಿ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru-2

ಚಿಕ್ಕಮಗಳೂರು, ಸೆ.26- ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ನಡೆ, ನುಡಿ ಮತ್ತು ಆದರ್ಶಗಳನ್ನು ಇಂದಿನ ಶಿಕ್ಷಕರು ಮೈಗೂಡಿಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಸಲಹೆ ಮಾಡಿದರು.ನಗರದ ಶ್ರೀ ಕಾಮಧೇನು ಕ್ಷೇತ್ರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಶಿಕ್ಷಕರಿಗೆ ಶ್ರೀ ಕಾಮಧೇನು ಸೇವಾರತ್ನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ ಶಾರದಾ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಶಿಕ್ಷಕರು ಈ ದೇಶದ ನಿರ್ಮಾತೃಗಳು ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಮಹತ್ತರ ಹೊಣೆಗಾರಿಕೆ ಆ ಸಮುದಾಯದ ಮೇಲಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರಂತೆ ಇಂದಿನ ಶಿಕ್ಷಕರು ಸಮಾಜಮುಖಿಗಳಾಗಬೇಕು. ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.
ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ, ಶಿಕ್ಷಕರು ಮತ್ತು ಪೊಷಕರು ಶಿಕ್ಷಣದ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 222 ವಿದ್ಯಾರ್ಥಿಗಳಿಗೆ ಶ್ರೀ ಶಾರದಾ ಅನುಗ್ರಹ ಪ್ರಶಸ್ತಿ ಹಾಗೂ ಏಳು ಶಿಕ್ಷಕರಿಗೆ ಕ್ಷೇತ್ರದ ವತಿಯಿಂದ ಕಾಮಧೇನು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕ್ಷೇತ್ರದ ಧರ್ಮಾಧಿಕಾರಿ ಎಂ.ಎಸ್.ನಂಜುಂಡಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಬಿ.ಎಸ್.ಬಸವರಾಜು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin