ಸಾಂಸ್ಕೃತಿಕ ನಗರಿಯಲ್ಲಿ ಮುಂದುವರೆದ ಸರಗಳ್ಳರ ಹಾವಳಿ

ಈ ಸುದ್ದಿಯನ್ನು ಶೇರ್ ಮಾಡಿ

chain--snacher

ಮೈಸೂರು,ನ.6-ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರೆದಿದ್ದು ಇಂದು ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ನಗರದ ಎರಡು ಕಡೆ ಮಹಿಳೆಯರ ಸರ ಕಸಿದು ಪರಾರಿಯಾಗಿದ್ದಾರೆ.
ಇಟ್ಟಿಗೆಗೂಡು ಬಡವಾಣೆ ನಿವಾಸಿ ರುಕ್ಮಿಣಿ ಎಂಬ ಮಹಿಳೆ ಬೆಳಗ್ಗೆ 7.55ರಲ್ಲಿ ಮನೆ ಮುಂದೆ ಮೊಮ್ಮಕ್ಕಳನ್ನು ಆಡಿಸುತ್ತಿದ್ದಾಗ, ಪಲ್ಸರ್ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಇವರ ಕೊರಳಿಗೆ ಕೈ ಹಾಕಿ 100 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಘಟನೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ಮತ್ತೆ ಕರಾಮತ್ತು ತ್ಚ್ಚೋರಿದ್ದು, ನಗರದ ಕೃಷ್ಣಮೂರ್ತಿಪುರಂ ನಿವಾಸಿ ಸುಮಾ ಎಂಬುವರು ಮನೆ ಮುಂದೆ ನಿಂತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಈಕೆಯ 37 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಬೈಕ್‍ನಲ್ಲಿ ಪರಾರಿಯಾಗಿದ್ದಾರೆ. ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ತಿಂಗಳಿನಿಂದ ಸುಮಾರು 30ರಿಂದ 40 ಸರಗಳ್ಳತನ ಪ್ರಕರಣಗಳು ವಿವಿಧ ಪೊ ಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದರೂ ಸರಗಳ್ಳರನ್ನು ಪತ್ತೆಹಚ್ಚುವಲ್ಲಿ ಪೊ ಲೀಸರು ವಿಫಲರಾಗಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅಲ್ಲದೆ ನಿನ್ನೆ ಸಂಜೆ ಕೂಡ ನಗರದ ಎರಡು ಕಡೆ ಸರಗಳ್ಳತನ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಇಂದು ಬೆಳ್ಳಗ್ಗೆ ಎರಡು ಕಡೆ ಕಳ್ಳತನ ನಡೆದಿರುವುದರಿಂದ ನಗರದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin