ಸಾಧು-ಸಂತರ ವೇಷದಲ್ಲಿ ಭಯೋತ್ಪಾದಕರ ದಾಳಿ ಸಾಧ್ಯತೆ : ಯುಪಿಯಲ್ಲಿ ಹೈಅಲರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Terrorist

ಲಕ್ನೋ, ಏ.22-ಕೇಸರಿ ವಸ್ತ್ರ ಧರಿಸಿ ಸಾಧು-ಸಂತರು ಅಥವಾ ಸನ್ಯಾಸಿಗಳ ವೇಷದಲ್ಲಿ ಭಯೋತ್ಪಾದಕರು ಆಯೋಧ್ಯ, ಮಥುರಾ ಸೇರಿದಂತೆ ಉತ್ತರ ಪ್ರದೇಶದ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭಿಸಿದ್ದು, ರಾಜ್ಯದ್ಯಾಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.   ಉತ್ತರ ಪ್ರದೇಶ ರಾಜ್ಯ ಪೊಲೀಸ್ ಮಹಾನಿರ್ದೇಶಕ ಜಾವೀದ್ ಅಹಮದ್ ಅವರನ್ನು ಬದಲಾಯಿಸಿ ಆ ಹುದ್ದೆಗೆ 1980ರ ಬ್ಯಾಚ್‍ನ ಐಪಿಎಸ್ ಅಧಿಕಾರಿ ಸುಲ್ಕನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿಯೋಜಿಸಿದ ಸಂದರ್ಭದಲ್ಲೇ ಈ ಮಾಹಿತಿ ಲಭ್ಯವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.ಯೋಗಿ ಮುಖ್ಯಮಂತ್ರಿಯಾದ ಬಳಿಕ ಉತ್ತರಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ಧ ಕೈಗೊಂಡಿರುವ ಕ್ರಮ, ನಿರ್ದಿಷ್ಟ ಕೋಮಿನ ಪ್ರತ್ಯೇಕತಾವಾದಿಗಳ ನಿಗ್ರಹ ಹಾಗೂ ಇಸ್ಲಾಮಿಕ್ ಸ್ಟೇಟ್ ಸಂಪರ್ಕ ಜಾಲವನ್ನು ಪತ್ತೆ ಮಾಡುತ್ತಿರುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಧಾರ್ಮಿಕ ಮಹತ್ವವಿರುವ ಸ್ಥಳಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರು ಸಜ್ಜಾಗಿದ್ದಾರೆ ಎಂದು ಗುಪ್ತಚರ ವರದಿ ತಿಳಿಸಿದೆ.   ಪೊಲೀಸರ ಕಣ್ಗಾವಲನ್ನು ತಪ್ಪಿಸಲು ಕೇಸರಿ ವಸ್ತ್ರಧಾರಿ ಸಾಧು-ಸಂತರು ಅಥವಾ ಸನ್ಯಾಸಿಗಳ ವೇಷದಲ್ಲಿ ಈ ಸ್ಥಳಗಳನ್ನು ಪ್ರವೇಶಿಸಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿಚ್ಛಿದ್ರಕಾರಿಗಳ ನಿಗ್ರಹ :

ಸಮಾಜಘಾತುಕ ಶಕ್ತಿಗಳು ಮತ್ತು ಗೂಂಡಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ನೂತನ ಡಿಜಿಪಿ ಸುಲ್ಕನ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.   ಇಂದು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಯವರ ಅದ್ಯತೆ ಅನ್ವಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin