ಸಾಮಿಲ್‍ಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂಪಾಯಿ ಮೌಲ್ಯದ ಮರ, ಮಟ್ಟುಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

fire

ಬಾಗೇಪಲ್ಲಿ , ಏ.15-ಆಕಸ್ಮಿಕವಾಗಿ ಸಾಮಿಲ್‍ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮರ , ಮಟ್ಟುಗಳು ನಷ್ಟವಾಗಿರುವ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ನ್ಯಾಷನಲ್ ಕಾಲೇಜಿಗೆ ಹೋಗುವ ರಸ್ತೆಯಲ್ಲಿರುವ ಬಷೀರ್ ಕಟ್ಟಿಗೆ ಸಾಮಿಲ್‍ಗೆ ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದುದನ್ನು ರಾತ್ರಿ ಬೀಟ್‍ನಲ್ಲಿದ್ದ ಪೊಲೀಸರು ನೋಡಿ ಕೂಡಲೇ ಅಗ್ನಿಶಾಮಕ ದಳ ಮತ್ತು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಸುಮಾರು 2-3 ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲಿಗೆ ಜನರೇಟರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಇತರೆಡೆಗೆ ವ್ಯಾಪಿಸಿದೆ ಎನ್ನಲಾಗಿದೆ. ಶಾರ್ಟ್ ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ.ಈ ಬೆಂಕಿ ಅವಘಡದಲ್ಲಿ ಕಟ್ಟಿಗೆ ಕತ್ತರಿಸುವ ಮೀಷನ್ ಸೇರಿದಂತೆ ಸುಮಾರು 22 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin