ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬ : ಇಬ್ಬರು ಮಕ್ಕಳ ಸಾವು, ದಂಪತಿ ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

woman--tablet-suicide

ಕುಂದಾಪುರ, ಅ. 17: ಇಂದು ಬೆಳಿಗ್ಗೆ ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕುಂದಾಪುರ ತಾಲೂಕು ಬೈಂದೂರು ಸಮೀಪದ ಗಂಗನಾಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಂಪತಿ ಸ್ಥಿತಿ ಗಂಭೀರವಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ. ಕೌಟುಂಬಿಕ ಕಲಹದಿಂದ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.

ಶಂಕರನಾರಾಯಣ(45) ಹಾಗೂ ಮಹಾಲಕ್ಷ್ಮೀ(39) ದಂಪತಿ ತಮ್ಮ ಮಕ್ಕಳಾದ ಅಶ್ವಿನ್ ಕುಮಾರ್ (16), ಐಶ್ವರ್ಯಾ ಹೆಬ್ಬಾರ್(14) ಅವರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ಈ ಕುರಿತಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin