ಸಾಮೂಹಿಕ ಸತ್ಯನಾರಾಯಣ ವ್ರತ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru--8

ಚಿಕ್ಕಮಗಳೂರು, ಆ.19-ನಗರ ಹೊರವಲಯದ ತೇಗೂರಿನಲ್ಲಿ ಗ್ರಾಮ ಸುಭೀಕ್ಷೆಗಾಗಿ ಪ್ರಾರ್ಥಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಮತ್ತು ಗ್ರಾಮಸ್ಥರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರ ನಡುವೆ ಎಪ್ಪತ್ತೈದು ದಂಪತಿಗಳು ಸಾಮೂಹಿಕವಾಗಿ ಸತ್ಯನಾರಾಯಣ ವ್ರತ ಕೈಗೊಂಡರು.ನಂತರ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಉಪನ್ಯಾಸಕ ಹೆಚ್.ಎಂ.ನಾಗರಾಜ್ ರಾವ್, ಸತ್ಸಂಗ ಗಳಿಸಿ ಧಾರ್ಮಿಕ ಆಚರಣೆ ಭಗವಂತನ ಅರ್ಚನೆ ಮಾಡುವುದರಿಂದ ಮಾನಸಿಕ ಶಾಂತಿ ಮತ್ತು ನೆಮ್ಮದಿ ದೊರೆತು ಜನ್ಮ ಸಾರ್ಥಕವಾಗುತ್ತದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕಿ ಗೀತಾ ಮಾತನಾಡಿ ಆಧುನಿಕತೆಯ ನಾಗಾಲೋಟದಲ್ಲಿ ಮರೆಯಾಗುತ್ತಿರುವ ನಮ್ಮ ಸಾಂಸ್ಕೃತಿ, ಸಂಸ್ಕಾರ ಮತ್ತು ಸಂಪ್ರದಾಯವನ್ನು ಉಳಿಸಿ ಜನತೆಯಲ್ಲಿ ಧಾರ್ಮಿಕತೆಯನ್ನು ಬೆಳೆಸುವ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಲಕ್ಷ್ಮಣರಾಜ ಅರಸ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಬೇಬಿ, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ವಸ್ತಾರೆ ಗ್ರಾ.ಪಂ. ಅಧ್ಯಕ್ಷ ವಿ.ಪಿ.ರವಿ, ಕೂದುವಳ್ಳಿ ಗ್ರಾ.ಪಂ. ಉಪಾದ್ಯಕ್ಷೆ ಜಯಮ್ಮ, ರೈತ ಸಂಘದ ಮುಖಂಡ ಕೃಷ್ಣೇಗೌಡ, ಎಂ.ಸಿ.ನೇತ್ರಾವತಿ ಉಪಸ್ಥಿತರಿದ್ದರು.

ಚಿಕ್ಕಮಗಳೂರು:ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಹ ಕಾರ್ಯದರ್ಶಿಯಾಗಿ ನವಾಬ್ ಸಾಹಿಬ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ.

 

 

► Follow us on –  Facebook / Twitter  / Google+

Facebook Comments

Sri Raghav

Admin