ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers suicide

ಕುಣಿಗಲ್, ಸೆ.28-ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೆಂಚನಹಳ್ಳಿ ಗ್ರಾಮದ ನಿವಾಸಿ ನಂದೀಶ್(43) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಕೊಳವೆ ಬಾವಿ ಕೊರೆಸಲೆಂದು 2 ಲಕ್ಷ ರೂ. ಕೈ ಸಾಲ ಮಾಡಿದ್ದು, ಕಲ್ಪತರು ಗ್ರಾಮೀಣ ಬ್ಯಾಂಕ್‍ನಲ್ಲಿ 2 ಲಕ್ಷ ಸಾಲ ಪಡೆದಿದ್ದರು. ಮೊದಲು ಕೊರೆಸಿದ್ದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ, ಮತ್ತೊಂದುಕೊಳವೆ ಬಾವಿಯನ್ನು ಕೊರೆಸಿದ್ದು, ಅದರಲ್ಲೂ ಕೂಡ ನೀರು ಬಾರದೆ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ತನ್ನ ಮನೆಯ ಹಿತ್ತಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ತಹಶೀಲ್ದಾರ್ ಕೆ.ರಮೇಶ್, ಸಿಪಿಐ ಬಾಳೇಗೌಡ, ಪಿಎಸ್‍ಐ ಅನಿಲ್‍ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin