ಸಾಲಬಾಧೆ : ಇಬ್ಬರು ರೈತರು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಮಾ.24-ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ.

ಸುಂಡಿಗೆರೆ :

ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಸುಂಡಿಗೆರೆ ಗ್ರಾಮದ ಎಚ್.ಉಮೇಶ್(38) ಆತ್ಮಹತ್ಯೆ ಮಾಡಿಕೊಂಡ ರೈತ.ಉಮೇಶ್ ತಮ್ಮ 3.12 ಎಕರೆ ಜಮೀನಿನಲ್ಲಿ ಅಡಿಕೆ, ತೆಂಗು ಬೆಳೆ ಹಾಕಿದ್ದು, ಬರದ ಹಿನ್ನೆಲೆಯಲ್ಲಿ ಫಸಲು ಕಟ್ಟದೆ ಬೆಳೆ ನಷ್ಟ ಅನುಭವಿಸಿದ್ದರಿಂದ ಬ್ಯಾಂಕ್ ಹಾಗೂ ಕೈ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಉಮೇಶ್ ಅವರಿಗೆ ಕಳೆದ 6 ತಿಂಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಕಾಲು ಮುರಿದಿದ್ದು, ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜನಹಳ್ಳಿ:

ಮತ್ತೊಂದು ಪ್ರಕರಣದಲ್ಲಿ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ರಮೇಶ್ ತಳವಾರ(34) ಎಂಬ ರೈತ ಮನೆಯಲ್ಲಿಯೇ ನೇಣು ಬಿಗಿದುಕೊಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈತ ಕೈ ಸಾಲ ಮಾಡಿಕೊಂಡಿದ್ದು ಈ ವಿಷಯವಾಗಿ ಮನೆಯವರ ಜತೆ ಜಳಗ ಮಾಡಿಕೊಂಡು ತದನಂತರ ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin