ಸಾಲಬಾಧೆ : ಕೃಷಿ ಹೊಂಡಕ್ಕೆ ಬಿದ್ದು ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

suicide

ಚನ್ನಪಟ್ಟಣ, ಅ.6- ಬೇಸಾಯಕ್ಕಾಗಿ ಲಕ್ಷಾಂತರ ರೂ ಕೈ ಸಾಲ ಮಾಡಿಕೊಂಡಿದ್ದ ಯುವ ರೈತ ಮಾನಸಿಕವಾಗಿ ಮನನೊಂದು ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಕ್ಕೂರು ಗ್ರಾಮದ ರಿತಿನ್‍ಗೌಡ(25) ಆತ್ಮಹತ್ಯೆ ಮಾಡಿಕೊಂಡ ಯುವ ರೈತ.ಈತ ಬೇಸಾಯಕ್ಕೆಂದು ಹಲವರ ಬಳಿ ಸುಮಾರು 7 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದು, ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಮಾನಸಿಕವಾಗಿ ಮನನೊಂದಿದ್ದರು ಎನ್ನಲಾಗಿದೆ. ಅಕ್ಕೂರು ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಕೃಷಿ ಹೊಂಡದಲ್ಲಿ ನಿನ್ನೆ ರಾತ್ರಿ ರಿತಿನ್‍ಗೌಡ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

 

 

► Follow us on –  Facebook / Twitter  / Google+

Facebook Comments

Sri Raghav

Admin