ಸಾಲಬಾಧೆ : ಹೊಲದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Former-Suicide--01

ಹುಬ್ಬಳ್ಳಿ, ಜೂ.30- ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಸಾಲಬಾಧೆಗೆ ನೊಂದ ರೈತನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಯನಗೌಡ ಪಾಟೀಲ್ (45) ಆತ್ಮಹತ್ಯೆಗೆ ಶರಣಾದ ರೈತ. ತನಗಿದ್ದ ಆರು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಯನಗೌಡ ಪಾಟೀಲ್ ಬೆಳೆ ಬೆಳೆಯುವ ಸಲುವಾಗಿ ವಿವಿಧ ಬ್ಯಾಂಕ್‍ಗಳಿಂದ 10ಲಕ್ಷಕ್ಕೂ ಹೆಚ್ಚು ಹಣ ಸಾಲ ಪಡೆದಿದ್ದರು.

ಆದರೆ, ಸರಿಯಾಗಿ ಬೆಳೆ ಬಾರದ ಹಿನ್ನೆಲೆಯಲ್ಲಿ ನಷ್ಟ ಉಂಟಾಗಿತ್ತು. ಇದರಿಂದ ಸಾಲ ತೀರಿಸುವುದಾದರೂ ಹೇಗೆ ಎಂದು ಬೇಸತ್ತು ತನ್ನ ಜಮೀನಿನಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin