ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 1200 ಕೆಎಸ್‍ಆರ್‍ಟಿಸಿ ಬಸ್‍ ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

Ksrtc

ಬೆಂಗಳೂರು, ಆ.11- ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ನಗರದಿಂದ ರಾಜ್ಯದ ವಿವಿಧೆಡೆಗೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ತೆರಳಲಿದ್ದು, ಅವರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೇವೆಯನ್ನು ಕೆಎಸ್‍ಆರ್‍ಟಿಸಿ ಕಲ್ಪಿಸಿದೆ. ಆ.12 ರಿಂದ 14ರವರೆಗೆ ಮೂರು ದಿನ ನಗರದಿಂದ ರಾಜ್ಯದ ವಿವಿಧೆಡೆಗೆ ಹಾಲಿ ಇರುವ ಬಸ್ ಸೇವೆಗಳ ಜೊತೆಗೆ ಹೆಚ್ಚುವರಿಯಾಗಿ 1200 ಬಸ್‍ಗಳನ್ನು ಓಡಿಸಲಿದೆ. ರಜೆ ಮುಗಿಸಿಕೊಂಡು ನಗರಕ್ಕೆ ಹಿಂದಿರುಗಲು ಅನುಕೂಲವಾಗುವಂತೆ ರಾಜ್ಯ ಹಾಗೂ ಹೊರರಾಜ್ಯದ ವಿವಿಧೆಡೆಯಿಂದ ನಗರಕ್ಕೆ ಆ.15ರ ರಾತ್ರಿ ವಿಶೇಷ ಬಸ್‍ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದು, ಮುಂಗಡ ಬುಕಿಂಗ್ ವ್ಯವಸ್ಥೆ ಕಲ್ಪಿಸಿದೆ.
ಯಾವ ನಿಲ್ದಾಣದಿಂದ ವಿಶೇಷ ಬಸ್ ಸೇವೆ..?:

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.  ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ತಿರುಚಿ, ಚೆನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜೆಪಿ ನಗರ, ಜಯನಗರ 4ನೆ ಬ್ಲಾಕ್ ಮತ್ತು 9ನೆ ಬ್ಲಾಕ್, ಜÁಲಹಳ್ಳಿ ಕ್ರಾಸ್, ನವರಂಗ್(ರಾಜÁಜಿನಗರ), ಮಲ್ಲೇಶ್ವರಂ 18ನೆ ಅಡ್ಡ ರಸ್ತೆ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.  ವಾಯುವ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಇತ್ಯಾದಿ) ಕಡೆಗೆ ಕಾರ್ಯಾಚರಣೆಯಾಗುವ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಸಾರಿಗೆಗಳನ್ನು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸದರಿ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿರಿಸಿದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು.
ಈಶಾನ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಇತ್ಯಾದಿ) ಕಾರ್ಯಾಚರಣೆಯಾಗುವ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಸಾರಿಗೆಗಳನ್ನು ಶ್ರೀ ಬಸವೇಶ್ವರ ಬಸ್ ನಿಲ್ದಾಣ(ಪೀಣ್ಯ)ದಿಂದ ಕಾರ್ಯಾಚರಣೆ ಮಾಡಲಾಗುವುದು. ಸದರಿ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು.

► Follow us on –  Facebook / Twitter  / Google+

Facebook Comments

Sri Raghav

Admin