ಸಾವಿನಲ್ಲೂ ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ, 18 ಪ್ರಯಾಣಿಕರು ಬಚಾವ್

ಈ ಸುದ್ದಿಯನ್ನು ಶೇರ್ ಮಾಡಿ

Bus-Accident--01

ತುಮಕೂರು, ಮಾ. 17- ಚಾಲಕನೊಬ್ಬ ಸಮಯಪ್ರಜ್ಞೆಯಿಂದಾಗಿ ಬಸ್‍ನಲ್ಲಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲನೆ ಮಾಡುವಾಗಲೇ ಡ್ರೈವರ್ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸಂದರ್ಭದಲ್ಲಿ ತೋರಿದ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಬಸ್ ಚಾಲಕ ನಾಗರಾಜ್(56) ಮೃತಪಟ್ಟವರು.

ಆಂಧ್ರದ ಅಮರಾಪುರದಿಂದ ಶಿರಾ ತಾಲ್ಲೂಕಿನ ಬರಗೂರಿಗೆ ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಕರೆದೊಯ್ಯುವಾಗ ಬರಗೂರು ಬಳಿ ಲಕ್ಕನಹಳ್ಳಿ ಹಳ್ಳದ ಬಳಿ ಚಾಲಕ ನಾಗರಾಜ್ (56)ಗೆ ಎದೆ ನೋವು ಕಾಣಿಸಿಕೊಂಡಿತು . ಬಸ್ ವೇಗಕ್ಕೆ ರಸ್ತೆ ಬದಿ ಇದ್ದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ನಿಂತಿದೆ. ಬಸ್ ಸ್ವಲ್ಪ ಮುಂದೆ ಹೋಗಿದ್ದರೂ ಭಾರೀ ಅನಾಹುತವೇ ಸಂಭವಿಸುತ್ತಿತ್ತು.

Bus-Accident--02

ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‍ನಲ್ಲಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟಣನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin