ಸಿಂಧು, ಸಾಕ್ಷಿ, ದೀಪಾಗೆ ಬಿಎಂಡಬ್ಲ್ಯು ಕಾರ್ ಉಡುಗೊರೆ

ಈ ಸುದ್ದಿಯನ್ನು ಶೇರ್ ಮಾಡಿ

Sachin-01

ಹೈದರಾಬಾದ್, ಆ.28-ರಿಯೋ ಒಲಿಂಪಿಕ್ ಕ್ರೀಡಾಕೂಟದಲ್ಲಿ ದೇಶದ ಘನತೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಭಾರತದ ಹೆಮ್ಮೆಯ ಕ್ರೀಡಾಪಟುಗಳಾದ ಪಿ.ವಿ.ಸಿಂಧು, ಸಾಕ್ಷಿ ಮಲಿಕ್ ಮತ್ತು ದೀಪಾ ಕರ್ಮಾಕರ್ ಹಾಗೂ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಅವರಿಗೆ ಇಂದು ಬಿಎಂಡಬ್ಲ್ಯು ಕಾರುಗಳನ್ನು ಕೊಡುಗೆಯಾಗಿ ನೀಡಲಾಗಿದೆ.  ರಿಯೋ ಒಲಿಂಪಿಕ್ಸ್ನಲ್ಲಿ ಗಮನಾರ್ಹ ಸಾಧನೆ ಮಾಡಿರುವ ಈ ನಾಲ್ವರಿಗೆ ಹೈದರಾಬಾದ್ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಚಾಮುಂಡೇಶ್ವರ್ನಾಥ್ ಅವರು ಈ ಲಕ್ಷುರಿ ಕಾರುಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ರಿಯೋ ಒಲಿಂಪಿಕ್ಸ್ನ ಭಾರತೀಯ ತಂಡಕ್ಕೆ ಗುಡ್ವಿಲ್ ಅಂಬಾಸಿಡರ್ ಆಗಿರುವ ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಅವರು ಇಲ್ಲಿನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ನಾಲ್ವರು ಕ್ರೀಡಾಪಟುಗಳಿಗೆ ಬಿಎಂಡಬ್ಲ್ಯು ಕಾರುಗಳ ಕೀಲಿ ಕೈಗಳನ್ನು ನೀಡಿದರು.

► Follow us on –  Facebook / Twitter  / Google+

Facebook Comments

Sri Raghav

Admin