‘ಸಿಎಂ ಋಣ ಲಿಂಗಾಯತರ ಮೇಲಿದೆ, ಲಿಂಗಾಯತ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ’

ಈ ಸುದ್ದಿಯನ್ನು ಶೇರ್ ಮಾಡಿ

Vinay-Kulkarni--02

ಹುಬ್ಬಳ್ಳಿ, ಏ.3- ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಯಾರೂ ಧೈರ್ಯ ಮಾಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಧೈರ್ಯ ಮಾಡಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದಾರೆ. ಸಿಎಂ ಋಣ ಲಿಂಗಾಯತರ ಮೇಲಿದೆ. ಲಿಂಗಾಯತ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ ಎಂದು ಸಚಿವ ವಿನಯ್ ಕುಲಕರ್ಣಿ ಇಂದಿಲ್ಲಿ ಹೇಳಿದರು.

ಜನಾಶೀರ್ವಾದ ಯಾತ್ರೆಗೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳಿನ ಸರದಾರರು. ಚುನಾವಣೆಯಲ್ಲಿ ಗೆದ್ದು ನಮ್ಮ ಸಾಮಥ್ರ್ಯ ಏನೆಂಬುದನ್ನು ಅವರಿಗೆ ತೋರಿಸುತ್ತೇವೆ. ಮಾದಿಗ ಸಮಾಜ ಸೇರಿದಂತೆ ದಲಿತ ಸಮುದಾಯಗಳು 12ನೆ ಶತಮಾನದಿಂದ ಲಿಂಗಾಯತರ ಜತೆಗಿವೆ. ಮುಖ್ಯಮಂತ್ರಿಗಳು ಕೊಟ್ಟ ಯೋಜನೆಗಳ ಆಧಾರದ ಮೇಲೆ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್‍ನ ಸಾಧನೆಗಳನ್ನು ಬಿಜೆಪಿಯವರು ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ. ಮತದಾರರು ಪ್ರಬುದ್ಧರಿದ್ದಾರೆ. ಅವರ ಮುಂದೆ ಬಿಜೆಪಿಯವರ ಆಟ ನಡೆಯುವುದಿಲ್ಲ ಎಂದು ಹೇಳಿದರು. ಲಿಂಗಾಯತರಿಗೆ 40 ಕ್ಷೇತ್ರಗಳಲ್ಲಿ ಟಿಕೆಟ್ ಕೊಡಲು ಕಾಂಗ್ರೆಸ್ ಹೈಕಮಾಂಡ್‍ಗೆ ಮನವಿ ಮಾಡುತ್ತೇವೆ. ಹೆಚ್ಚಿನ ಸ್ಥಾನಗಳನ್ನು ಪಡೆದು ಗೆದ್ದು ನಮ್ಮ ಸಾಮಥ್ರ್ಯ ಸಾಬೀತುಪಡಿಸುತ್ತೇವೆ ಎಂದು ವಿನಯ್ ಕುಲಕರ್ಣಿ ತಿಳಿಸಿದರು.

Facebook Comments

Sri Raghav

Admin