ಸಿಎಂ ಕುಮಾರಸ್ವಾಮಿ ಮತ್ತು ಪಿಎಂ ಮೋದಿ ಭೇಟಿಗೆ ಸಮಯ ನಿಗದಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy------0114

ಬೆಂಗಳೂರು. ಮೇ.26 : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಕುಮಾರಸ್ವಾಮಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂಆದ ನಂತರ ಮೊದಲ ಬಾರಿಗೆ ಸೋಮವಾರ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಸಾಬೀತು ಮಾಡಿದ ದಿನವೇ ಪ್ರಧಾನಿ ಮೋದಿ ಅವರ ಭೇಟಿಗಾಗಿ ಸಮಯ ಕೋರಿದ್ದರು. ಆದರೆ, ಅನೇಕ ಕಾರಣಗಳಿಂದ ಪ್ರಧಾನಿ ಸಮಯ ನೀಡಿರಲಿಲ್ಲ, ಈಗ ಕುಮಾರಸ್ವಾಮಿಯವರ ಭೇಟಿಗೆ ಸಮಯ ನಿಗದಿಪಡಿಸಿದ್ದು, ಸೋಮವಾರ ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯ ಭೇಟಿಗೆ ಸಮಯ ನಿಗದಿ ಮಾಡಿದೆ.

ನೂತನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸೋಮವಾರ ಪ್ರಧಾನಿ ಭೇಟಿಗಾಗಿ ನಾಳೆಯೇ ದೆಹಲಿಗೆ ತೆರಳಲಿದ್ದಾರೆ. ಪ್ರವಾಸದ ವಿವರವನ್ನು ಭಾನುವಾರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ನಾಳೆ ಸಿಎಂ ಕುಮಾರಸ್ವಾಮಿಯವರು ರಾಹುಲ್ ಅವರನ್ನು ಭೇಟಿಯಾಗಿ ಸಚಿವ ಸಂಪುಟ ರಚನೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin