ಸಿಎಂ ಜಂಟಿ ಕಾರ್ಯದರ್ಶಿ ಎದುರೇ ಪುರಸಭೆ ಮುಖ್ಯಾಧಿಕಾರಿಗೆ ಅವಾಜ್

ಈ ಸುದ್ದಿಯನ್ನು ಶೇರ್ ಮಾಡಿ

ee-sanje

ಟಿ.ನರಸೀಪುರ, ಆ.19- ಮುಖ್ಯ ಮಂತ್ರಿಗಳ ಜಂಟಿ ಕಾರ್ಯದರ್ಶಿ ಎದುರೇ ಕಾಂಗ್ರೆಸ್ ಯುವ ಮುಖಂಡ ಪುರಸಭೆ ಮುಖ್ಯಾಧಿಕಾರಿಗೆ ಅವಾಜ್ ಹಾಕಿದ ಘಟನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು.ತಾಪಂ ಅಧ್ಯಕ್ಷರ ಕೊಠಡಿಗೆ ತೆರಳಿದ ರಾಮಯ್ಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಅಧ್ಯಕ್ಷರ ಕೊಠಡಿಗೆ ತೆರಳಿದ ಕಾಂಗ್ರೆಸ್ ಯುವ ಮುಖಂಡ ಹೆಳವರಹುಂಡಿ ಸೋಮು ಪುರಸಭೆ ಮುಖ್ಯಾಧಿಕಾರಿ ವಿ.ಟಿ.ವಿಲ್ಸನ್‍ರವರು ಸಾರ್ವಜನಿಕರ ಕೆಲಸ ಮಾಡುವಲ್ಲಿ ವಿಫಲರಾಗಿದ್ದು, ಕ್ಷೇತ್ರ ವ್ಯಾಪ್ತಿಯ ಕಾಮಗಾರಿ ನಡೆಸುವಾಗ ಜನ ಪ್ರತಿನಿಧಿಗಳನ್ನು ನಿರ್ಲಕ್ಷಿಸಿ ಕೆಲಸ ನಿರ್ವಹಿಸುತ್ತಿದ್ದಾರೆಂದು ಮುಖ್ಯಾಧಿಕಾರಿ ಎದುರಲ್ಲೇ ರಾಮಯ್ಯರವರಿಗೆ ದೂರಿದರು.  ಇದಕ್ಕೆ ಉತ್ತರಿಸಿದ ವಿ.ಟಿ.ವಿಲ್ಸನ್, ಇವರ ವೈಯಕ್ತಿಕ ದ್ವೇಷದಿಂದ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು. ಇದರಿಂದ ಕೋಪಗೊಂಡ ಯಳವರಹುಂಡಿ ಸೋಮು ಅಧಿಕಾರಿಗೆ ಅವಾಜ್ ಹಾಕಿದರು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ರಾಮಯ್ಯ ಈ ರೀತಿ ಮಾತನಾಡಿಸುವುದು ನಿಮಗೆ ಶೋಭೆಯಲ್ಲ ಎಂದು ಗದರಿಸಿದರು.

 

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin