ಸಿಎಂ ಭೇಟಿ ಮಾಡಲು ಹೊರಟ ರೈತರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

mandya

ಹುಳಿಯಾರು, ನ.15- ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರ ಪರಿಸ್ಥಿತಿ ವೀಕ್ಷಿಸಲು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಬಂದ ಮುಖ್ಯಮಂತ್ರಿಗಳು ಹುಳಿಯಾರಿನ ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಜೊತೆ ಚರ್ಚಿಸಬೇಕು. ಇಲ್ಲದಿದ್ದಲ್ಲಿ ಮುಖ್ಯಮಂತ್ರಿಗಳು ಸಾಗುವ ಮಾರ್ಗ ಮಧ್ಯೆ ವಾಹನ ತಡೆಯುವುದಾಗಿ ಎಚ್ಚರಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಜರುಗಿತು.ಇದಕ್ಕೂ ಮುನ್ನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಂಸದರಾದ ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ರೈತರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ತರುವುದಾಗಿ ಭರವಸೆ ನೀಡಿದರು.
ರೈತಸಂಘದ ಜಿಲ್ಲಾಧ್ಯಕ್ಷ ಶಂಕರಣ್ಣ ಅವರ ಮುಖಂಡತ್ವದಲ್ಲಿ ಸಭೆ ನಡೆದು ಈ ಹಿಂದೆ ನಡೆದ ಪಾದಾಯಾತ್ರೆಯ ವೇಳೆ ರೈತ ಸಂಘದ ಮುಖಂಡರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಬ್ಬರಿಗೆ ಬೆಂಬಲ ಬೆಲೆ ನೀಡುವು ದಾಗಿ ಹೇಳಿದ್ದ ಮುಖ್ಯಮಂತ್ರಿಗಳ ಮಾತಿಗೆ ತಪ್ಪಿದ್ದು, ಇಂದು ಕೊಬ್ಬರಿನಾಡಿಗೆ ಆಗಮಿಸಿರುವ ಅವರನ್ನು ಭೇಟಿ ಮಾಡಿ ಕೊಬ್ಬರಿಗೆ 15 ಸಾವಿರ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸೋಣ ಎಂದು ಹೊರಡುತ್ತಿದ್ದಂತೆಯೇ ಮಾರುಕಟ್ಟೆಯ ಪ್ರವೇಶ ದ್ವಾರದಲ್ಲಿ ಕಾದುನಿಂತಿದ್ದ ಪೊಲೀಸರು ಎಲ್ಲರನ್ನು ಬಂಧಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin