ಸಿಎಂ ಸಿದ್ದರಾಮಯ್ಯಗೆ ತುರ್ತು ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01
ಬೆಂಗಳೂರು,ಮಾ.15-ವೇದಿಕೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡು ರಾವ್, ವಿ.ಎಸ್.ಉಗ್ರಪ್ಪ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

ಬಿಎಸ್‍ವೈ ವೈಯಕ್ತಿಕ ವಿಚಾರಗಳ ಬಗ್ಗೆ ಕಾಂಗ್ರೆಸ್ ಮುಖಂಡರು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದು, ಇದನ್ನು ನಿರ್ಬಂಧಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪನವರು ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ನರೇಂದ್ರ ಅವರ ಏಕಸದ್ಯಸ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರಿಗೆ ತುರ್ತು ನೋಟಿಸ್ ಜಾರಿ ಮಾಡಿ, ಅರ್ಜಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದೆ.

Facebook Comments

Sri Raghav

Admin