ಸಿಎಂ ಸಿದ್ದರಾಮಯ್ಯನವರ ಅವಧಿಯಲ್ಲಿ 2,42,420 ಕೋಟಿ ಸಾಲ..!

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha

ಬೆಂಗಳೂರು,ಜೂ.14-ಸಾಲ ಸಿಗಲಿದೆ ಎಂಬ ಕಾರಣಕ್ಕೆ ಸಾಲ ಮಾಡಬಾರದು ಎಂದು ಉಪದೇಶ ಮಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ರಾಜ್ಯದ ಜನರ ಮೇಲೆ ತಲಾ 32 ಸಾವಿರದಿಂದ 35 ಸಾವಿರ ರೂ.ಗಳ ಸಾಲದ ಹೊರೆಯನ್ನು ಹೊರಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿ ಟೀಕಿಸಿದರು.   ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 2,42,420 ಕೋಟಿ ರೂ. ಸಾಲ ಮಾಡಲಾಗಿದೆ ಎಂದರು.

ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ 5 ವರ್ಷದ ಅವಧಿಯಲ್ಲಿ 35,902 ಕೋಟಿ ಸಾಲ ಮಾಡಲಾಗಿತ್ತು. ಧರಂಸಿಂಗ್ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ 15,635 ಕೋಟಿ, ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ 3,545 ಕೋಟಿ ಮಾಡಲಾಗಿತ್ತು. ಬಿಎಸ್‍ವೈ ಸಿಎಂ ಆಗಿದ್ದಾಗ 25,653 ಕೋಟಿ, ಸದಾನಂದಗೌಡರ ಅವಧಿಯಲ್ಲಿ 9,357 ಕೋಟಿ ಹಾಗೂ ತಾವು ಸಿಎಂ ಆಗಿದ್ದಾಗ 13,464 ಕೋಟಿ ರೂ. ಸಾಲ ಮಾಡಲಾಗಿತ್ತು ಎಂದು ಅಂಕಿ ಅಂಶ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಸಾಲ ಸಿಗಲಿದೆ ಎಂಬ ಕಾರಣಕ್ಕೆ ಸಾಲ ಮಾಡಬಾರದು ಎಂದು ಉಪದೇಶ ಮಾಡಿದ್ದರು. ಆದರೆ ಅಧಿಕಾರ ಬಂದ ಮೊದಲ ವರ್ಷದಲ್ಲಿ ಸಾಲದ ಪ್ರಮಾಣವನ್ನು ಉಲ್ಲೇಖಿಸಿ ಅದು ಹಿಂದಿನ ಸರ್ಕಾರದ ಬಳುವಳಿ ಎಂದು ಹೇಳಿದ್ದರು ಎಂದು ಟೀಕಿಸಿದರು.   ಈಗ ಅವರೇ ಸಾಕಷ್ಟು ಸಾಲ ಮಾಡಿದ್ದಾರೆ. ಮುಖ್ಯಮಂತ್ರಿ ಏನೇ ಹೇಳಲಿ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು , ಆರ್ಥಿಕ ಪರಿಸ್ಥಿತಿ ಸರಿಪಡಿಸುತ್ತೇವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin