ಸಿಎಂ ಸಿದ್ದರಾಮಯ್ಯ ದಾವುದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ : ಪ್ರಹ್ಲಾದ್ ಜೋಶಿ

ಈ ಸುದ್ದಿಯನ್ನು ಶೇರ್ ಮಾಡಿ

Prahlad-Joshi--Siddaramaiah

ಹುಬ್ಬಳ್ಳಿ,ಸೆ.5- ಮುಖ್ಯಮಂತ್ರಿ ಸಿದ್ದರಾಮಯ್ಯ ದಾವುದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತನೆ ಮಾಡುತಿದ್ದಾರೆ ಎಂದು ಸಂಸದ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು  ಬಿಜೆಪಿಯಿಂದ ಮಂಗಳೂರು ಚಲೋ ಬೈಕ್ ರ್ಯಾಲಿ ಹಿನ್ನೆಲೆ ಅವರ ವರ್ತನೆ ಸರಿ ಅಲ್ಲ. ರಾಜ್ಯ ಸರ್ಕಾರ ಬೈಕ್ ರ್ಯಾಲಿಗೆ ಅಡ್ಡಿಪಡಿಸುತ್ತಿರುವುದು ಖಂಡನೀಯವಾಗಿದೆ ಎಂದರು. ಸಿಎಂ ಸಿದ್ಧರಾಮಯ್ಯ ದಾವುದ್ ಇಬ್ರಾಹಿಮ್ ಚಿಕ್ಕಪ್ಪನಂತೆ ವರ್ತಿಸುತ್ತಿದ್ದು, ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆ ಖಂಡನೀಯವಾಗಿದೆ.

ಮುಸ್ಲಿಂಮರ ಅತೀಯಾದ ಓಲೈಕೆಗೆ ಒಂದಲ್ಲಾ ಒಂದು ದಿನ ಸಿಎಂ ಬೆಲೆ ತೆರಬೇಕಾಗುತ್ತೆ. ಬೈಕ್ ಮೇಲೆ ಬರೋದೆ ಅಪರಾಧ ಎನ್ನುವ ರೀತಿ ಪೊಲೀಸರು ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ಮುಸ್ಲಿಮರ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ.  ಅಲ್ಪಸಂಖ್ಯಾತರ ಓಲೈಕೆಯಿಂದ ದೇಶದಲ್ಲಿ ಕಾಂಗ್ರೆಸ್ ಹೀನಾಯದ ಸ್ಥಿತಿ ತಲುಪಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿಯೂ ಕಾಂಗ್ರೆಸ್ ಹೀನಾಯದ ಸ್ಥಿತಿ ತಲುಪಲಿದ್ದು, ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಎಚ್ಚರಿಕೆ ನೀಡಿದರು.  ಯಾವಾಗಲೂ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದಿಲ್ಲ ಇದು ತಿಳಿದು ವರ್ತಿಸಲಿ ಎಂದು ಕಿವಿ ಮಾತು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin