ಸಿಎಂ ಸಿದ್ದರಾಮಯ್ಯ ನವರ ನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ದೇವೆಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

dasgsdgsgಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಬುಧವಾರ ಸಂಜೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ “ಕಾವೇರಿ’ಗೆ ಆಗಮಿಸಿದ ದೇವೇಗೌಡರು, ಕೆಲಕಾಲ ಸಿದ್ದರಾಮಯ್ಯ ಅವರ ಜತೆಗಿದ್ದು, ಇಂತಹ ಸಂದರ್ಭದಲ್ಲಿ ನಾಡಿನ ದೊರೆಯಾದ ನೀವು ಧೈರ್ಯ ತಂದುಕೊಳ್ಳಬೇಕು. ಆಧ್ಯಾತ್ಮಿಕ ಹಾಗೂ ತಾತ್ವಿಕವಾಗಿ ಪರಿಸ್ಥಿತಿ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.  ಜ್ವರದ ಕಾರಣದಿಂದ ರಾಕೇಸ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಾಗಲಿಲ್ಲ ಎಂದು ಹೇಳಿದ ದೇವೆಗೌಡರು ರಾಕೇಶ್ ಉತ್ಸಾಹಿ ಯುವಕನಾಗಿದ್ದ. ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆಯಬೇಕಿದ್ದ ಹುಡುಗ. ವಿಧಿಯಾಟ ತಡೆಯಲು ಯಾರಿಂದಲೂ ಆಗದು. ಹಿರಿಯ ಪುತ್ರನನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಆಗಿರುವ ನೋವು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಈ ಸಂದರ್ಭದಲ್ಲಿ ಧೈರ್ಯ ತುಂಬುವ ಸಲುವಾಗಿ ಬಂದಿದ್ದೆ ಎಂದು ಹೇಳಿದರು.

Facebook Comments

Sri Raghav

Admin