ಸಿಎಂ ಸಿದ್ದರಾಮಯ್ಯ ಮತ್ತು ಉಮಾಶ್ರೀ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha-a01

ಬೆಂಗಳೂರು, ನ.4- ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಾಗಿದೆ. ವಕೀಲರಾದ ಎನ್.ಶಂಕರಪ್ಪ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಮಾಡಲಾಗಿದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಹೈಕೋರ್ಟ್ ಮುಂದೆ ಪ್ರಮಾಣ ಪತ್ರ ಸಲ್ಲಿಸಿದ ಬಳಿಕವೂ ಅರ್ಹರಿಗೆ ಪ್ರಶಸ್ತಿ ನೀಡದೆ ಸರ್ಕಾರ ಅನ್ಯಾಯ ಮಾಡಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

2013ರಲ್ಲಿಯೇ ಸಾಹಿತಿ ಸತ್ಯ ವಿಠಲ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಸಾಹಿತಿ ಸತ್ಯವಿಠಲ ಅವರು 86 ಪುಸ್ತಕಗಳನ್ನು ಬರೆದಂತಹ ಲೇಖಕರು. ಹೈಕೋರ್ಟ್ ನಿರ್ದೇಶನದ ಮೇರೆಗೆ ಮಾರ್ಗದರ್ಶಿ ಸೂತ್ರಗಳನ್ನು ರಚನೆ ಮಾಡಿ 2016ರಲ್ಲಿ ಸತ್ಯವಿಠಲ ಅವರಿಗೆ ಪ್ರಶಸ್ತಿ ನೀಡದೆ ದ್ರೋಹ ಮಾಡಿದೆ ಎಂದು ಮುಖ್ಯಮಂತ್ರಿ ಸೇರಿದಂತೆ ಮೂವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin