ಸಿಎಂ ಸಿದ್ದರಾಮಯ್ಯ, ಶ್ರೀರಾಮುಲು ತಾವು ಸ್ಪರ್ಧಿಸಿದ ಕ್ಷೇತ್ರದಲ್ಲಿ ಮತದಾನ ಮಾಡುತ್ತಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 12- ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಶ್ರೀರಾಮುಲು ಅವರ ಮತಗಳು ಎರಡೂ ಕ್ಷೇತ್ರಗಳಲ್ಲಿ ಇಲ್ಲದಿರುವುದು ವಿಪರ್ಯಾಸ. ಬಾದಾಮಿ, ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ತಮ್ಮ ಮತ ಇಲ್ಲ. ತಮ್ಮ ಮತವನ್ನು ತಾವೇ ಹಾಕಿಕೊಳ್ಳಲು ಅವರಿಗೆ ಅವಕಾಶವಿಲ್ಲ. ಅವರ ಮತ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಇದೆ. ಅವರು ಅಲ್ಲಿ ಮತ ಚಲಾಯಿಸಿದರು. (ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

Sidddaramaiah-Sriramulu

ಅದೇ ರೀತಿ ಶ್ರೀರಾಮುಲು ಬಾದಾಮಿ ಹಾಗೂ ಮೊಳಕಾಲ್ಮೂರು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಅವರ ಮತ ಇಲ್ಲ. ಅವರ ಮತ ಇರುವುದು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಬಾದಾಮಿ ಹಾಗೂ ಮೊಣಕಾಲ್ಮೂರಿನಲ್ಲಿ ಶ್ರೀರಾಮುಲು ಅವರ ಮತ ಇಲ್ಲ. ಅವರು ತಮ್ಮ ಸ್ವಕ್ಷೇತ್ರ ಬಳ್ಳಾರಿ ಗ್ರಾಮೀಣದಲ್ಲಿ ಮತ ಚಲಾಯಿಸಿದರು.  ಬಾದಾಮಿ, ಚಾಮುಂಡೇಶ್ವರಿ ಹೈ ವೋಲ್ಟೇಜ್ ಕ್ಷೇತ್ರಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾದಾಮಿಯಲ್ಲಿ ಶ್ರೀರಾಮುಲು ಪೈಪೋಟಿ ನೀಡಿದರೆ, ಚಾಮುಂಡೇಶ್ವರಿಯಲ್ಲಿ ಜಿ.ಟಿ.ದೇವೇಗೌಡ ಅವರು ತೀವ್ರ ಸ್ಪರ್ಧೆಯೊಡ್ಡಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆದಿದೆ. ಮತದಾರರು ಯಾರ ಕೈ ಹಿಡಿದಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆಡೆಯಾಗಿದ್ದು, ಮೇ 15ರಂದು ಫಲಿತಾಂಶ ಹೊರಬೀಳಲಿದೆ.

Facebook Comments

Sri Raghav

Admin