ಸಿಐಎಸ್ಎಫ್ ನಲ್ಲಿ ಕಾನ್ಸ್‌ಟೇಬಲ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

 

cisfಕೇಂದ್ರ ಗೃಹ ಸಚಿವಾಲಯದ ಕೈಗಾರಿಕಾ ರಕ್ಷಣಾ ಸೇನೆ (ಸಿಐಎಸ್ಎಫ್) ಯಲ್ಲಿ ಕಾನ್ಸ್‌ಟೇಬಲ್ ಮತ್ತು ಅಥವಾ ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ ; 487
ವಿದ್ಯಾರ್ಹತೆ :  ಪಿಯುಸಿ (12ನೇ ತರಗತಿ) ಅಥವಾ ಇದಕ್ಕೆ ಸಮನಾದ ಶಿಕ್ಷಣದಲ್ಲಿ  ಉತ್ತೀರ್ಣರಾಗಿರಬೇಕು.
ವಯೋಮಿತಿ : 18 ರಿಂದ 23 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ನಿಯಮಗಳ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ : ಸಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಿಗೊಳಿಸಲಾಗಿದ್ದು,  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ನಿವೃತ್ತ ಸೇನಾ ಸಿಬ್ಬಂದಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಎಸ್ ಬಿ ಐ ಚಲನ್, ಆನ್ ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದಾಗಿದೆ.


ಆಯ್ಕೆ ವಿಧಾನ : ಅಭ್ಯರ್ಥಿಯ ಎತ್ತರ ಪರೀಕ್ಷೆ, ಪಿಎಸ್ ಟಿ, ಪಿಎಫ್ ಟಿ, ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರೀಯೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 11-01-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ https://cisfrectt.in  ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments

Sri Raghav

Admin