ಸಿಟಿ ಸಿವಿಲ್ ಕೊರ್ಟ್‍ಗೆ ಸುನಿಲ್ ಹೆಗ್ಗರವಳ್ಳಿ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Suneel--012
ಬೆಂಗಳೂರು, ಡಿ.15- ಪತ್ರಕರ್ತ ರವಿ ಬೆಳಗೆರೆ ತನ್ನ ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ತಮ್ಮ ವಾದ ಆಲಿಸುವಂತೆ ಸಿಟಿ ಸಿವಿಲ್ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಯಾಗಿರುವ ಪತ್ರಕರ್ತ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದ್ದು, ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ನೀಡದಂತೆ ಅರ್ಜಿಯಲ್ಲಿ ಸುನಿಲ್ ಹೆಗ್ಗರವಳ್ಳಿ ಮನವಿ ಮಾಡಿದ್ದಾರೆ. ಅಲ್ಲದೆ, ರವಿ ಬೆಳಗೆರೆಯವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ರದ್ದುಮಾಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ತಮ್ಮ ವಾದವನ್ನು ಕೂಡ ಆಲಿಸಬೇಕೆಂದು ಇಂದು 65ನೆ ಸಿಟಿ ಸಿವಿಲ್ ಕೋರ್ಟ್‍ಗೆ ಹಾಜರಾಗಿ ಅರ್ಜಿ ಸಲ್ಲಿಸಿದ್ದಾರೆ.

Facebook Comments

Sri Raghav

Admin