ಸಿಡಿಲು ಬಡಿದು ಇಬ್ಬರು ಕುರಿಗಾಯಿಗಳ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

thunderstorm

ಕಡೂರು, ಮೇ 14– ಕುರಿ ಮೇಯಿಸಲು ಹೋಗಿದ್ದ ಇಬ್ಬರಿಗೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕುರುಬಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊನ್ನಪ್ಪನವರ ಪುತ್ರ ಅರುಣ(24) ಮತ್ತು ಪರಮೇಶ ಅವರ ಪತ್ನ್ನಿ ಆಶಾ(28) ಸಿಡಿಲಿಗೆ ಬಲಿಯಾದ ದುರ್ದೈವಿಗಳು.  ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮಕ್ಕೆ ಹೊಂದಿಕೊಂಡಿರುವ ಕುರುಬಗೆರೆ ಗ್ರಾಮದಲ್ಲಿ ಶ್ಮಸಾನಮೌನ ಆವರಿಸಿತ್ತು. ಮೃತ ದೇಹಗಳನ್ನು ಗ್ರಾಮದ ಬಸವೇಶ್ವರ ದೇವಾಲಯದ ಪಕ್ಕದ ಮೈದಾನದಲ್ಲಿ ಇರಿಸಲಾಗಿತ್ತು. ಇಡೀ ಗ್ರಾಮದ ಜನ ಸಮೂಹವೇ ಅಲ್ಲಿ ನೆರೆದಿತ್ತು.

ಸ್ಥಳಕ್ಕೆ ಜಿಲ್ಲಾ ಕುರಿ ಸಹಕಾರ ಸಂಘದ ಅಧ್ಯಕ್ಷ ಎ.ಎನ್.ಮಹೇಶ್, ಜಿಪಂ ಸದಸ್ಯ ಕೆ.ಆರ್.ಮಹೇಶ್ ಒಡೆಯರ್, ತಾಪಂ ಸದಸ್ಯ ತಿಮ್ಮಯ್ಯ, ಎಪಿಎಂಸಿ ಅಧ್ಯಕ್ಷ ಮಚ್ಚೇರಿ ಓಂಕಾರಪ್ಪ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಆನಂದ್, ಬೀರೂರು-ಕಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ವಿನಾಯಕ್ ಹಾಗೂ ಎಂ.ಹೆಚ್. ಚಂದ್ರಪ್ಪ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭ ಮಾಧ್ಯಮಗಳೊಂದಿಗೆ ಎ.ಎನ್.ಮಹೇಶ್ ಮಾತನಾಡಿ, ಸಿಡಿಲು ಬಡಿದು ಸಾವಪ್ಪಿರುವ ಎರಡೂ ಕುಟುಂಬಗಳಿಗೆ ಸರ್ಕಾರದಿಂದ ನೀಡುವ ಪರಿಹಾರವನ್ನು ತಕ್ಷಣವೇ ನೀಡಲು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚಿಸಿರುವುದಾಗಿ ತಿಳಿಸಿದರು.

ಸ್ಥಳದಲ್ಲಿ ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆಂಚಪ್ಪ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಸತ್ಯನಾರಾಯಣ, ಮುಖಂಡರಾದ ಜಿಗಣೆಹಳ್ಳಿ ನೀಲಕಂಠಪ್ಪ, ಜಗದೀಶ, ನಾರಾಯಣಮೂರ್ತಿ, ಸಗುನಪ್ಪ ಮತ್ತಿತರರು ಸ್ಥಳದಲ್ಲಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin