ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡುವಂತೆ ಮೋದಿಗೆ ಪಾತ್ರ ಬರೆದ ಎಸ್.ಎಂ.ಕೃಷ್ಣ

ಈ ಸುದ್ದಿಯನ್ನು ಶೇರ್ ಮಾಡಿ

SM-Krishna--01

ಬೆಂಗಳೂರು, ಜ.20- ಭಕ್ತರ ಪಾಲಿನ ನಡೆದಾಡುವ ದೇವರು, ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವಂತೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಎಸ್.ಎಂ.ಕೃಷ್ಣ , ಡಾ. ಸಿದ್ದಗಂಗಾ ಶ್ರೀಗಳ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಭಾರತ ರತ್ನ ಪ್ರಶಸ್ತಿ ನೀಡುವುದು ಸೂಕ್ತ ಎಂದು ಸಲಹೆ ಮಾಡಿದ್ದಾರೆ.

ಕಳೆದ ಒಂದು ಶತಮಾನದಿಂದ ಸಿದ್ದಗಂಗಾ ಶ್ರೀಗಳು ಶಿಕ್ಷಣ, ಸಾಮಾಜಿಕ, ಆರೋಗ್ಯ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ. ಭಕ್ತರ ಪಾಲಿಗೆ ನಡೆದಾಡುವ ದೇವರೇಂದೇ ಅವರನ್ನು ಕರೆಯುತ್ತಾರೆ. ಇಂತಹ ಶ್ರೇಷ್ಠರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರ ನೀಡುವಂತೆ ಮನವಿ ಮಾಡಿದ್ದಾರೆ. 111 ವರ್ಷದ ಶ್ರೀಗಳು ಇಂದಿಗೂ ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತ, ಭಕ್ತರಿಗೆ ದರ್ಶನ, ಮಾರ್ಗದರ್ಶನ ನೀಡುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಸಂಸ್ಕøತ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪಾಂಡಿತ್ಯ ಸಾಧಿಸಿರುವ ಶ್ರೀಗಳು ಲಕ್ಷಾಂತರ ಬಡ ಮಕ್ಕಳಿಗೆ ಶಿಕ್ಷಣ ನೀಡಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಈಗಲೂ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತವಾಗಿ ಅನ್ನದಾಸೋಹ ನೀಡುವ ಮೂಲಕ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರೆ ಭಕ್ತರು ಸಂಭ್ರಮಿಸುತ್ತಾರೆ. ಕೇಂದ್ರ ಸರ್ಕಾರ ಕೂಡಲೇ ಪ್ರಶಸ್ತಿಯನ್ನು ಘೋಷಣೆ ಮಾಡುವಂತೆ ಎಸ್.ಎಂ.ಕೃಷ್ಣ ಪತ್ರದಲ್ಲಿ ಕೋರಿದ್ದಾರೆ.

Facebook Comments

Sri Raghav

Admin