ಸಿದ್ದರಾಮಯ್ಯನವರನ್ನು ನಿಂದಿಸುವವರಿಗೆ ನನ್ನ ಎಕ್ಕಡಾ..!

ಈ ಸುದ್ದಿಯನ್ನು ಶೇರ್ ಮಾಡಿ

hubba-1

ಹುಬ್ಬಳ್ಳಿ,ಡಿ.14- ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಅವರ ಹೆಸರು ನಾಮಕರಣ ಮಾಡಲು ಮುಂದಾದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನು ಬಹಿರಂಗವಾಗಿ ನಿಂದನೆ ಮಾಡುತ್ತಿರುವವರಿಗೆ ನನ್ನ ಎಕ್ಕಡಾ ಎಂದು ಮನಸೂರಿನ ರೇವಣಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು ಕಟುವಾಗಿ ಟೀಕಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅನೇಕ ಅಭಿವೃದ್ಧಿ ಕಾರ್ಯ ಮಾಡುತಿದ್ದಾರೆ. ಮುಂದೆ 2018ರಲ್ಲಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಸಿದ್ದರಾಮಯ್ಯಾ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ಕಂಬಳಿ ಬೀಸುತ್ತದೆ, ಭಂಡಾರ ಹಾರುತ್ತದೆ ಹಾಗೂ ಡೊಳ್ಳು ನಿನಾದ ಮೊಳಗುತ್ತದೆ ಎಂದರು.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬಾಯಿಗೆ ಬಂದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನು ನಿಂದನೆ ಮಾಡುತಿದ್ದಾರೆ, ಇದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈಗ ಹುಬ್ಬಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರು ನಾಮಕರಣ ಮಾಡಿ ರಾಜಕಾರಣ ಮಾಡಲು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮುಂದಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

Facebook Comments

Sri Raghav

Admin