ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಹಂದಿ ತಿಂದು ಮಸೀದಿಗೆ ಹೋಗಲಿ..!

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ತುಮಕೂರು, ಅ.24- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸದೂಟ ಮಾಡಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅದು ಆಹಾರ ಪದ್ಧತಿ ಎಂದು ಸಮರ್ಥನೆ ಮಾಡಿಕೊಂಡಿರುವುದು ಭಕ್ತರ ಭಾವನೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬೇಡರ ಕಣ್ಣಪ್ಪನನ್ನು ಉದಾಹರಣೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ತಿಂದು ತಿಂದು ಮಸೀದಿಗೆ ಪ್ರವೇಶ ಮಾಡಿ ಇದೂ ಕೂಡಾ ಆಹಾರ ಪದ್ಧತಿ ಎಂದು ಸಮರ್ಥನೆ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು.

ನೂರಾರು ವರ್ಷ ಇತಿಹಾಸವಿರುವ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ರಾಜ್ಯ, ರಾಷ್ಟ್ರಾದ್ಯಂತ ಕೋಟಿ ಕೋಟಿ ಭಕ್ತರಿದ್ದಾರೆ. ಅವರ ಭಾವನೆಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡು ಮಾಂಸದೂಟ ಮಾಡಿ ದೇವಾಲಯ ಪ್ರವೇಶಿಸಿರುವುದು ತೀವ್ರ ಆಕ್ರೋಶ ತರುತ್ತಿದೆ ಎಂದು ಹೇಳಿದರು.
ಸಿದ್ದರಾಮಯ್ಯ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಜಾತಿ ಜಾತಿಗಳ ನಡುವೆ ಒಡಕು ಮೂಡಿಸುವುದು ಯಾವ ಲಾಭಕ್ಕಾಗಿ. ಇದು ರಾಜಕೀಯ ಲಾಭಕ್ಕಾಗಿ ಯಾರನ್ನು ಬೇಕಾದರೂ ನಿರ್ನಾಮ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ನಗರ ಶಾಸಕ ರಫೀಕ್ ಅಹಮದ್ ಅವರ ಕರ್ಮಕಾಂಡವನ್ನು ಹಂತ ಹಂತವಾಗಿ ಬಹಿರಂಗಪಡಿಸುತ್ತೇನೆ ಎಂದು ಸೊಗಡು ಶಿವಣ್ಣ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಪಿ.ಮಹೇಶ್, ನಂದೀಶ್, ನಂಜುಂಡಪ್ಪ, ಶಾಂತರಾಜ್, ಬನಶಂಕರಿಬಾಬು, ನವೀನ್, ಕಾಂತರಾಜು ಮತ್ತಿತರರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin