ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಆರ್‍ಎಸ್‍ಎಸ್ ನಿಷೇಧಿಸಲಿ : ಈಶ್ವರಪ್ಪ ಸವಾಲ್

ಈ ಸುದ್ದಿಯನ್ನು ಶೇರ್ ಮಾಡಿ

Eeshwarappa--02

ಬೆಂಗಳೂರು, ಜ.7-ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಆರ್‍ಎಸ್‍ಎಸ್ ಸಂಘಟನೆಗೆ ನಿಷೇಧ ಹೇರಲಿ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ದಾರೆ. ವಿಜಯನಗರದ ಬಿಜಿಎಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುತ್ತಿರುವ ಕೆಎಫ್‍ಡಿ, ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಒತ್ತಾಯಿಸಿದರೆ ಆರ್‍ಎಸ್‍ಎಸ್ ಸಂಘಟನೆಯನ್ನೂ ನಿಷೇಧ ಮಾಡುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ನಿಷೇಧಿಸಿ ಎಂದು ಅಬ್ಬರಿಸಿದ್ದಾರೆ.

ಆರ್‍ಎಸ್‍ಎಸ್ ಒಂದು ದೇಶಭಕ್ತ ಸಂಘಟನೆಯಾಗಿದೆ. ದೇಶದ ಸಂಸ್ಕøತಿ, ಭಾಷೆ, ಆಚಾರ, ವಿಚಾರ ಸಂಪ್ರದಾಯಗಳನ್ನು ಪಾಲನೆ ಮಾಡುವುದು ಆರ್‍ಎಸ್‍ಎಸ್ ಧ್ಯೇಯೋದ್ದೇಶ. ಇಂತಹ ಸಂಘಟನೆಗೆ ನಿಷೇಧ ಹೇರಿದರೆ ದೇಶಭಕ್ತರು ಬೀದಿಗಿಳಿಯಲಿದ್ದಾರೆ ಎಂದು ಎಚ್ಚರಿಸಿದರು. ಕರಾವಳಿ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೆಚ್ಚುತ್ತಿರುವ ಗಲಭೆಗೆ ಕೆಲವು ಮೂಲಭೂತ ಸಂಘಟನೆಗಳೇ ನೇರ ಕಾರಣ. ನಿಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ವಿಷ ಬೀಜವನ್ನು ಬಿತ್ತುತ್ತಿದ್ದೀರಿ. ಇದು ನಿಮಗೆ ಮುಂದೊಂದಿನ ಮುಳುವಾಗಲಿದೆ ಎಂದು ಗುಡುಗಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸಿಲಿಕಾನ್ ಸಿಟಿ ಇಂದು ರೇಪ್ ಸಿಟಿಯಾಗಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರ ನಡುವೆ ಹೊಂದಾಣಿಕೆ ಇಲ್ಲದಿರುವ ಕಾರಣ ಪೆÇಲೀಸರು ಯಾರೊಬ್ಬರ ಮಾತು ಕೇಳುತ್ತಿಲ್ಲ. ರೌಡಿಗಳು, ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಅಧಿಕಾರದ ಮದ ನೆತ್ತಿಗೇರಿದೆ. ಇನ್ನು ಮೂರು ತಿಂಗಳಲ್ಲಿ ಅವರು ಮನೆಗೆ ಹೋಗುವುದು ನಿಶ್ಚಿತ. ಬ್ರಹ್ಮ ಬಂದರೂ ಕೂಡ ಕಾಂಗ್ರೆಸ್ ಪಕ್ಷವನ್ನು ಮೇಲೆತ್ತಲು ಸಾಧ್ಯವಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಪ್ರಚಾರ ನಡೆಸಿದರೆ ಬಿಜೆಪಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಹೇಳಿದರು. ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಭಿವೃದ್ಧಿಯಲ್ಲಿ 6 ಅಡಿ ಮುಂದೆ ಹೋದರೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 3 ಅಡಿ ಹಿಂದಿದೆ ಎಂದು ವ್ಯಂಗ್ಯವಾಡಿದರು.

ಸಬ್ ಕಾ ಸಾಥ್, ಸಬ್ಕಾ ವಿಕಾಸ್ ಘೋಷ ವಾಕ್ಯದೊಂದಿಗೆ ನಾವು ಜಾತಿ, ಧರ್ಮ ಯಾವುದನ್ನೂ ಲೆಕ್ಕಿಸದೆ ದೇಶವನ್ನು ಮುನ್ನಡೆಸುತ್ತಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ಧರ್ಮ ಮತ್ತು ಜಾತಿಗಳನ್ನು ಒಡೆದು ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದೆ. ಗುಜರಾತ್‍ನಲ್ಲಿ ಅದರ ಪ್ರಯೋಗ ಯಶಸ್ವಿಯಾಗಲಿಲ್ಲ. ಇನ್ನು ಕರ್ನಾಟಕದಲ್ಲೂ ಫ್ಲಾಪ್ ಶೋ ಆಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಭವಿಷ್ಯ ನುಡಿದರು.
ಕೇಂದ್ರ ಸರ್ಕಾರ ಕೊಟ್ಟ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ಮೋದಿಯನ್ನು ಟೀಕಿಸುವುದರಲ್ಲೇ ಸಿದ್ದರಾಮಯ್ಯ ಕಾಲ ಕಳೆಯುತ್ತಿದ್ದಾರೆ. ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಳುಗುತ್ತಿರುವ ಕಾಂಗ್ರೆಸ್ ಪಕ್ಷವನ್ನು ರಾಹುಲ್ ಗಾಂಧಿ ಇರಲಿ, ದೇವರು ಕೂಡ ರಕ್ಷಣೆ ಮಾಡಲಾರ ಎಂದರು.

Facebook Comments

Sri Raghav

Admin