ಸಿದ್ದರಾಮಯ್ಯನವರ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಿರಿ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-0144545

ಗೌರಿಬಿದನೂರು, ಜೂ.11– ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರದಿಂದ ಮಾತ್ರ ಅಭಿವೃದ್ದಿ ಪಥದತ್ತ ಕೊಂಡೊಯ್ಯಲು ಸಾಧ್ಯ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಲು ನಾವೆಲ್ಲರೂ ಸನ್ನದ್ದರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.  ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಜನ ಸಂಪರ್ಕ ಅಭಿಯಾನ ಬೃಹತ್ ಸಾರ್ವಜನಿಕರ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದಲ್ಲಿ ಯಾವುದಾದರೂ ಭ್ರಷ್ಟ ಸರ್ಕಾರವಿದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ, ಇದು ದಪ್ಪ ಚರ್ಮದ ಸರ್ಕಾರ, ತೊಗಲಕ್ ಸರ್ಕಾರ, ರೈತರ, ದಲಿತರ, ಹಿಂದುಳಿದವರ , ಅಲ್ಪಸಂಖ್ಯಾತರ ಸರ್ಕಾರ ಎಂದು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ರಕ್ಷಣೆಗಾಗಿ ಲೋಕಾಯುಕ್ತವನ್ನು ಸ್ಥಗಿತಗೊಳಿಸಿ ಎಸಿಬಿ ರಚನೆ ಮಾಡಿದ್ದಾರೆ ಇದು ತೊಗಲಕ್ ದರ್ಭಾರ್ ಅಲ್ಲವೇ ಎಂದು ಪ್ರಶ್ನಿಸಿದರು.

ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಈ ಹಿಂದೆಯೇ ತಿರಸ್ಕಿರಿಸಿದ್ದಾರೆ ಇದಕ್ಕಿಂತ ಸಾಕ್ಷಿ ಬೇಕೆ, ಮೋದಿ ಸರಕಾರ ದುಡಿಯುವ ಕೈಗಳಿಗೆ ಉದ್ಯೋಗ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ಮಾಡಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಎರಡು ಬಾರಿ ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರ ಬದುಕು ಮೂರಾಬಟ್ಟೆಯಾಗಿದೆ. ರೈತರ ನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಸಿಎಂ ಸೊಕ್ಕಿನ ಮಾತುಗಳನ್ನಾಡುತ್ತಿದ್ದಾರೆ.  ರಾಜ್ಯದ ಜನತೆ ಕಟ್ಟುವ ತೆರಿಗೆ ಹಣವನ್ನು ರಾಜ್ಯದ ಜನತೆಗೆ ಕೊಡಲು ನಿಮ್ಮದೇ ಅಡ್ಡಿ, ಕೆರೆಯ ನೀರು ಕೆರೆಗೆ ಚಲ್ಲಿ ಎಂದರು. ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದರು.

ಎತ್ತಿನಹೊಳೆ:

ನಮ್ಮ ಅಧಿಕಾರವಧಿಯಲ್ಲಿ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದು, ಆದರೆ ಸಿದ್ದರಾಮಯ್ಯ ಸರಕಾರ ಮಂಗಳೂರು ಜನರ ವಿರೋದವನ್ನು ಮನವೊಲಿಸುವ ಪ್ರಯತ್ನಗಳನ್ನು ಮಾಡುವುದನ್ನು ಬಿಟ್ಟು, ಪೈಪ್‍ಗಳ ಖರೀದಿಯಲ್ಲಿ ಕಮೀಷನ್ ಪಡೆಯುವಲ್ಲಿ ನಿರತವಾಗಿದೆ. ನಾನು ಅಧಿಕಾರಕ್ಕೆ ಬಂದ ತಕ್ಷಣ ಆ ಭಾಗದ ಜನರ ಮನವೊಲಿಸಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುತ್ತೇನೆ ಎಂದು ತಿಳಿಸಿದರು.  ನಾನು ರಾಜ್ಯದ ಮುಖ್ಯಮಂತ್ರಿಯಾಗ ಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿಲ್ಲ. ಮಾದರಿ ರಾಜ್ಯವನ್ನಾಗಿಸುವ ಉದ್ದೇದಿಂದ, ಜನರ ಮುಂದೆ ಹೋಗುತ್ತಿದ್ದೇನೆ ಎಂದರು.

ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ವಿ.ಸೋಮಶೇಖರ್, ಶಾಸಕ ಅರವಿಂದಲಿಂಬಾವಳಿ ,ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್.ಎಂ.ರವಿನಾರಾಯಣರೆಡ್ಡಿ ಮಾತನಾಡಿದರು.  ತಾಲೂಕು ಜೆಡಿಎಸ್ ಮುಖಂಡ ಕೆ.ವಿ.ಹನುಮಪ್ಪ ರೆಡ್ಡಿ ಪಕ್ಷವನ್ನು ತೊರೆದು ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡರು.

ವೇದಿಕೆಯಲ್ಲಿ ಮಾಜಿ ಸಚಿವ ಕಟ್ಟಸುಬ್ರಮಣ್ಯ ನಾಯ್ಡು, ಜಿಲ್ಲಾಧ್ಯಕ್ಷ ಡಾ.ಮಂಜುನಾಥ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಗೋಪಿನಾಥ್, ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ, ತಾಲೂಕು ಅಧ್ಯಕ್ಷ ಗೋಪಾಲಗೌಡ, ಜಿ.ಪಂ. ಸದಸ್ಯ ಭವ್ಯರಂಗನಾಥ್, ತಾ.ಪಂ. ಸದಸ್ಯ ಜಿ.ನರಸಿಂಹಮೂರ್ತಿ, ಪುರಸಭಾ ಸದಸ್ಯ ಮಾರ್ಕೇಟ್‍ಮೋಹನ್, ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ, ರಾಜ್ಯ ಕಾರ್ಯದರ್ಶಿ ಜಯದೇವ್ ಮತ್ತಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin