ಸಿದ್ದರಾಮಯ್ಯ ದರ್ಪಕ್ಕೆ ಉಪಚುನಾವಣೆಯಲ್ಲಿ ಉತ್ತರ ಸಿಗಲಿದೆ : ಶ್ರೀನಿವಾಸ್‍ಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Srinivas-Prasad

ಮೈಸೂರು, ಮಾ.10-ನಂಜನಗೂಡು ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಸಿದ್ದರಾಮಯ್ಯ ದರ್ಪಕ್ಕೆ ಉತ್ತರ ಸಿಗಲಿದೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್‍ಪ್ರಸಾದ್ ಟೀಕಾಪ್ರಹಾರ ನಡೆಸಿದ್ದಾರೆ.  ಮತದಾರರು ಆಲೋಚನೆ ಮಾಡಿ ಮತ ಚಲಾಯಿಸುತ್ತಾರೆ. ನಂಜನಗೂಡು ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿದ್ದು, ಗುಂಡ್ಲುಪೇಟೆ ಕ್ಷೇತ್ರದಲ್ಲೂ ಪ್ರವಾಸ ಮಾಡುತ್ತೇನೆ. ಚುನಾವಣೆ ಅಂಗವಾಗಿ ಇಂದು ಗುಂಡ್ಲುಪೇಟೆಗೆ ತೆರಳುತ್ತಿದ್ದೇನೆ. ಅಲ್ಲೂ ಸಹ ಕಾರ್ಯಕರ್ತರ ಸಭೆ ನಡೆಸಲಿದ್ದೇನೆ ಎಂದು ಹೇಳಿದರು.

ಈಗಾಗಲೇ ನಂಜನಗೂಡು ಕ್ಷೇತ್ರದ ಜನತೆಗೆ ನಾನು ರಾಜೀನಾಮೆ ನೀಡಿದ್ದರ ಕಾರಣ ತಿಳಿಸಿ ಕ್ಷಮೆ ಕೇಳಿದ್ದೇನೆ. ಬಿಜೆಪಿಯಲ್ಲಿದ್ದರೂ ಜನ ನನ್ನ ಕೈ ಹಿಡಿಯುತ್ತಾರೆ ಎಂಬ ಅಚಲ ನಂಬಿಕೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯುವಂತೆ ಆಯೋಗ ಕಠಿಣ ಕ್ರಮಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಚುನಾವಣಾವೀಕ್ಷಕರನ್ನು ನೇಮಿಸಿ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin