ಸಿದ್ದರಾಮಯ್ಯ ಸರಕಾರ ಬಡವರ- ಹಿಂದುಳಿದವರ-ಅಲ್ಪಸಂಖ್ಯಾತರ ಹಿತರಕ್ಷಣೆಗೆ ಬದ್ದ

ಈ ಸುದ್ದಿಯನ್ನು ಶೇರ್ ಮಾಡಿ

16

ಬಾಗಲಕೋಟ,ಫೆ.5- ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡವರ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಬದ್ದವಾಗಿದ್ದು ಈ ನಿಟ್ಟಿನಲ್ಲಿ ಆಶ್ರಯ, ವಾಂಬೆ, ಇಂದಿರಾ ಆವಾಸ್ ಯೋಜನೆಗಳಡಿಯಲ್ಲಿ ವಸತಿ ಸಾಲ ಮನ್ನಾ ಮಾಡಿದೆ ಎಂದು ಶಾಸಕ ಎಚ್.ವೈ. ಮೇಟಿ ಹೇಳಿದರು.ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನವನಗರದ ವಾಂಬೆ ಕಾಲೋನಿಯಲ್ಲಿ ನಿರ್ಮಿಸಲ್ಪಟ್ಟಿರುವ ಸಮುದಾಯ ಭವನದ ಉದ್ಘಾಟನೆ ಹಾಗೂ ವಾಂಬೆ ವಸತಿ ಯೋಜನೆಯಡಿ ನಿವೇಶನ ಪಡೆದುಕೊಂಡಿರುವ ಫಲಾನುಭವಿಗಳಿಗೆ ಬೇ-ಬಾಕಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ಬಿಟಿಡಿಎ ಸಭಾಪತಿ ಎ.ಡಿ. ಮೋಕಾಶಿ ಮಾತನಾಡಿ, ಆಶ್ರಯ, ವಾಂಬೆ ನಿವಾಸಿಗಳ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಗರೋತ್ಥಾನ ಯೋಜನೆಯಡಿ 35 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಮುಖಂಡ ನಾಗರಾಜ ಹದ್ಲಿ ಮಾತನಾಡಿ, ಸಿದ್ದರಾಮಯ್ಯ ಸರಕಾರ ವಸತಿ ಯೋಜನೆಗಳ ಸಾಲ ಮನ್ನಾ ಮಾಡುವ ಮೂಲಕ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಸಾಲ ಮನ್ನಾ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಹಾಜಿಸಾಬ ದಂಡಿನ, ಮಹಾಬುಬ್ಬಿ ತುರೇದ, ದಾವಲ್ ನಾಯ್ಕವಾಡಿ, ಭೀಮಣ್ಣ ಕೊಡಗಲಿ, ದಯಾನಂದ, ಶಫೀಕ ದೊಡ್ಡಕಟ್ಟಿ, ಕೊಳಚೆ ನಿರ್ಮೂಲನಾ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಎಸ್. ದಫೇದಾರ ಸೇರಿದಂತೆ ಇತರರು ಹಾಜರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin