ಸಿದ್ದರಾಮಯ್ಯ ಸರ್ಕಾರ ಕೋಮಾದಲ್ಲಿದೆ : ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

renukacharya

ತುಮಕೂರು, ಡಿ.12- ರಾಜ್ಯದಲ್ಲಿ ಉದ್ಭವವಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕೋಮಾದಲ್ಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ರೈತರ ಪಾಲಿಗೆ ಸತ್ತು ಹೋಗಿದೆ. ಇದನ್ನು ಬಡಿದೇಳಿಸುವ ಸಲುವಾಗಿ ಬಿಜೆಪಿ ರೈತ ಮೋರ್ಚಾದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಮಧುಗಿರಿ, ಕೊರಟಗೆರೆ, ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕುಗಳಲ್ಲಿ ಪ್ರವಾಸ ಕೈಗೊಂಡ ವೇಳೆ ರೈತರು ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ ಎಂದರು.

ಪ್ರಧಾನಮಂತ್ರಿಗಳು 500, 1000 ರೂ. ನೋಟುಗಳ ಅಮಾನ್ಯ ಮಾಡಿರುವುದರಿಂದ ಆಡಳಿತ ಪಕ್ಷದ ರಾಜಕೀಯ ನಾಯಕರು ನೋಟು ಬದಲಾವಣೆಯಲ್ಲಿ ನಿರತರಾಗಿದ್ದು, ಸಕಾರ ಲೂಟಿ ಹೊಡೆಯಲು ನಿರತವಾಗಿದೆ, ಭ್ರಷ್ಟಾಚಾರಿಗಳು ತಮ್ಮ ಆಸ್ತಿಗಳನ್ನು ರಕ್ಷಣೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಆಪಾದಿಸಿದರು.ರಾಜ್ಯ ಸರ್ಕಾರ ಮೊದಲು ಸಹಕಾರಿ ಸಂಸ್ಥೆಗಳಲ್ಲಿರುವ ರೈತರ ಸಾಲಮನ್ನಾ ಮಾಡಲಿ ನಂತರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸಾಲಮನ್ನಾ ಮಾಡಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‍ನವರು ರಾಜ್ಯದ ರೈತರ ಬಗ್ಗೆ ಚರ್ಚೆ ಮಾಡಲು ದೆಹಲಿಗೆ ಹೋಗುತ್ತಿಲ್ಲ, ಸಂಪುಟ ಪುನರ್ ರಚನೆ, ನಿಗಮ ಮಂಡಳಿಗಳ ಅಧ್ಯಕ್ಷರುಗಳ ಆಯ್ಕೆ ಇಂತಹ ವಿಚಾರಗಳ ಚರ್ಚೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲು ಹೋಗುತ್ತಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಕೂಡಾ ಸತ್ತುಹೋಗಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್, ಜಿಪಂ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸ್ನೇಕ್ ನಂದೀಶ್, ಬ್ಯಾಟರಂಗೇಗೌಡ, ಟಿ.ಆರ್. ಸದಾಶಿವಯ್ಯ, ಹಾಲನೂರು ಲೇಪಾಕ್ಷ್, ನರಸಿಂಹಮೂರ್ತಿ, ಪ್ರಸನ್ನ, ಮಂಜುನಾಥ್, ಶಿವಕುಮಾರ್, ಶೈಲಶ್ರೀ, ಸಂದೀಪ್‍ಗೌಡ ಮೊದಲಾದವರಿದ್ದರು.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin