ಸಿದ್ದರಾಮಯ್ಯ ಸೊಕ್ಕಿನಿಂದ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa---Siddaramaiah-

ತುಮಕೂರು, ಅ.31- ಮುಖ್ಯಮಂತ್ರಿ ಸಿದ್ದರಾಮಯ್ಯ ಸೊಕ್ಕಿನಿಂದ ಮೆರೆಯುತ್ತಿದ್ದಾರೆ. ರಾಜ್ಯದಲ್ಲಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಗೆ ತನ್ನನ್ನು ಕಂಡರೆ ಭಯವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಇದು ಮೂರ್ಖತನದ ಪರಮಾವಧಿ, ಒಬ್ಬ ಸಾಮಾನ್ಯ ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ನೀಡುವುದು ಶೋಭೆಯಲ್ಲ ಎಂದು ಚಾಟಿ ಬೀಸಿದರು.

ಎಲುಬಿಲ್ಲದ ನಾಲಿಗೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಅವರು ತಮ್ಮ ಮಾತಿನ ಮೇಲೆ ನಿಗಾ ವಹಿಸಬೇಕು. ಮುಖ್ಯಮಂತ್ರಿ ಸ್ಥಾನದಲ್ಲಿರುವವರು ನೀಡುವ ಹೇಳಿಕೆಗಳ ಬಗ್ಗೆ ಎಚ್ಚರ ವಹಿಸಬೇಕೆಂದರು. ಪ್ರಧಾನಿ ಮೋದಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವ ವೇಳೆ ಉಪವಾಸ ಮಾಡಿದ್ದರು. ಆದರೆ, ಸಿದ್ದರಾಮಯ್ಯನವರು ಮೀನು, ಕೋಳಿ ತಿಂದು ಶ್ರೀ ಕ್ಷೇತ್ರಕ್ಕೆ ಹೋಗಿ ಪೂಜೆ ಸಲ್ಲಿಸಿ ಭಕ್ತರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ಷೇಪಿಸಿದ ಯಡಿಯೂರಪ್ಪ, ರಾಜ್ಯಕ್ಕೆ ಇಂಥ ಕೆಟ್ಟ ಮುಖ್ಯಮಂತ್ರಿ ಇದ್ದಾರಲ್ಲ ಎಂದು ನೋವಾಗುತ್ತಿದೆ ಎಂದು ವಿಷಾದಿಸಿದರು.

Facebook Comments

Sri Raghav

Admin