ಸಿಬಿಐ ಪ್ರಶ್ನೆಗಳ ಸುರಿಮಳೆಗೆ ತಬ್ಬಿಬ್ಬಾದ ಲಾಲು

ಈ ಸುದ್ದಿಯನ್ನು ಶೇರ್ ಮಾಡಿ

Lalu-Prasad-Yadav

ನವದೆಹಲಿ, ಅ.5-ಭ್ರಷ್ಟಾಚಾರ ಪ್ರಕರಣದ ಸಂಬಂಧ ಆರ್‍ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್‍ರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ವಿಚಾರಣೆಗೆ ಒಳಪಡಿಸಿತು. ಖಾಸಗಿ ಸಂಸ್ಥೆಯೊಂದಕ್ಕೆ ಎರಡು ಐಆರ್‍ಸಿಟಿಸಿ ಹೋಟೆಲ್‍ಗಳ ನಿರ್ವಹಣಾ ಗುತ್ತಿಗೆ ನೀಡಲು ಭಾರೀ ಬೆಲೆಬಾಳುವ ಭೂಮಿಯನ್ನು ಲಂಚ ರೂಪದಲ್ಲಿ ಪಡೆದಿದ್ದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. ಈ ಸಂಬಂಧ ಸಿಬಿಐ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಲಾಲು ತಬ್ಬಿಬ್ಬಾದರು ಎಂದು ಮೂಲಗಳು ತಿಳಿಸಿವೆ.

ಲಾಲು ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗಲು ದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಆಗಮಿಸಿದರು. ಅವರು ಪುತ್ರಿ ಮಿಸಾ ಭಾರತಿ ಸಹ ಜೊತೆಗಿದ್ದರು. ಮಾಧ್ಯಮದ ಪ್ರತಿನಿಧಿಗಳು ಮಾತಿಗೆಳೆಯಲು ಯತ್ನಿಸಿದರಾದರೂ ಅವರು ಉತ್ತರಿಸಲಿಲ್ಲ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಲಾಲು ಪುತ್ರ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ನಾಳೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin