ಸಿಮೆಂಟ್ ಬ್ಲಾಕ್ ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 16- ನಿರ್ಮಾಣ ಹಂತದ ಕಟ್ಟಡದ ಸಮೀಪ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಅಹಿತಕರ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನ ಹೆಸರು, ವಾಸಸ್ಥಳದ ವಿವರ ತಿಳಿದುಬಂದಿಲ್ಲ. ಸುಮಾರು 20ರಿಂದ 23 ವರ್ಷದಂತೆ ಕಾಣುವ ಈ ಯುವಕ ಯಾರು, ಏತಕ್ಕಾಗಿ ಯಾರು ಕೊಲೆ ಮಾಡಿದ್ದಾರೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ವಿಜಯನಗರ ಪೈಪ್‍ಲೇನ್, 2ನೇ ಮುಖ್ಯರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡವಿದ್ದು, ರಾತ್ರಿ 12 ಗಂಟೆ ಸುಮಾರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಈತನ ಜೊತೆ ಜಗಳವಾಡಿ ತಳ್ಳಿದೆ. ಕೆಳಗೆ ಬಿದ್ದ ಈತನ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಮಾರ್ಗದಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್, ಯುವಕನ ಕೊಲೆಯಾಗಿರುವುದು ಕಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.  ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments