ಸಿವಿಲ್ ಕಾನ್‍ಸ್ಟೆಬಲ್‍ಗಳ ನೇಮಕ : ನಾಳೆ ವೈದ್ಯಕೀಯ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಕೆಜಿಎಫ್, ಫೆ.8-ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಮತ್ತು ಮಹಿಳಾ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಈಗಾಗಲೇ ಅರ್ಹರಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆ ಅಭ್ಯರ್ಥಿಗಳಿಗೆ ನಾಳೆ ಬೆಳಿಗ್ಗೆ 9 ಗಂಟೆಗೆ ಮೂಲ ದಾಖಲೆಗಳ ಪರಿಶೀಲನೆ ನಂತರ, ಕೆಜಿಎಫ್‍ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಲೋಕೇಶ್‍ಕುಮಾರ್ ತಿಳಿಸಿದರು.ಅವರು ಪತ್ರಿಕಾ ಪ್ರಕಟಣೆಯಲ್ಲಿ, ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಅಂಚೆ ಮೂಲಕ, ಎಸ್‍ಎಂಎಸ್, ಇ-ಮೇಲ್ ಮುಖಾಂತರ ಕರೆ ಪತ್ರಗಳನ್ನು ರವಾನಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ. http:\\policenewskgf.wordpress.com ಅವಲೋಕಿಸ ಬಹುದಾಗಿದೆಯೆಂದು ಅಥವಾ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಂಪರ್ಕಿಸಬಹುದೆಂದು ಜಿಲ್ಲಾ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ಕೋರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin