ಸುಪ್ರೀಂಕೋರ್ಟ್‍ಗೆ ಮಹದಾಯಿ ಮೇಲ್ಮನವಿ ಬೇಡ : ನಾರಿಮನ್ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.6-ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವ ಹಿರಿಯ ವಕೀಲ ನಾರಿಮನ್ ಅವರು ಇದರಿಂದ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತದೆಯೇ ಹೊರತು, ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ವಿವಾದವನ್ನು ಪ್ರಧಾನಿಗಳ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳುವುದು ಸೂಕ್ತವೇ ಹೊರತು, ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವುದು ತರವಲ್ಲ ಎಂದು ಹೇಳಿದ್ದಾರೆ.  ಈ ಹಿಂದೆಯೇ ನ್ಯಾಯಾಧೀಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಬೇಡಿ ಎಂದು ಸಲಹೆ ನೀಡಿದ್ದೆ. ಆದರೆ ರಾಜಕೀಯ ಒತ್ತಡಗಳಿಗೆ ಮಣಿದು ಮಧ್ಯಂತರ ಅರ್ಜಿ ಸಲ್ಲಿಸಲಾಯಿತು.

DSAGDSGDG

ಈಗ ನಮ್ಮ ಅರ್ಜಿ ತಿರಸ್ಕøತವಾಗಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಈಗ ಮೇಲ್ಮನವಿ ಸಲ್ಲಿಸಿದರೆ ಯಾವುದೇ ಉಪಯೋಗವಿಲ್ಲ. ಮಧ್ಯಂತರ ತೀರ್ಪು ಆಧರಿಸಿ ಸುಪ್ರೀಂಕೋರ್ಟ್ ತೀರ್ಪು ನೀಡುವುದಿಲ್ಲ. ಇದನ್ನು ರಾಜ್ಯಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin