ಸುಪ್ರೀಂಕೋರ್ಟ್‍ನಲ್ಲೂ ಮಾಜಿ ಲೋಕಾಯುಕ್ತ ಭಾಸ್ಕರ್ ರಾವ್ ಭಾರೀ ಹಿನ್ನಡೆ

ಈ ಸುದ್ದಿಯನ್ನು ಶೇರ್ ಮಾಡಿ

Bhaskar-roa

ನವದೆಹಲಿ, ಮಾ.6-ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿದ್ದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ್ ರಾವ್ ಅವರಿಗೆ ಇಂದು ಸುಪ್ರೀಂಕೋರ್ಟ್‍ನಲ್ಲೂ ಭಾರೀ ಹಿನ್ನಡೆಯಾಗಿದೆ.   ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಕೋರಿದ್ದ ನ್ಯಾ. ರಾವ್ ಅವರ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ ಸರ್ವೋಚ್ಚ ನ್ಯಾಯಾಲಯ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಅಲ್ಲದೇ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆಯೂ ಸ್ಪಷ್ಟ ಸೂಚನೆ ನೀಡಿದೆ.

ರಾವ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ನೇತೃತ್ವದ ಪೀಠ ವಿಚಾರಣೆ ನಡೆಸಿತು. ನ್ಯಾ. ಭಾಸ್ಕರ್‍ರಾವ್ ಪರ ಹಿರಿಯ ವಕೀಲ ಪಿ.ಪಿ. ರಾವ್ ವಾಧ ಮಂಡಿಸಿ, ತಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರು.   ಆದರೆ, ವಕೀಲರ ವಾದನ್ನು ಒಪ್ಪದ ನ್ಯಾಯಾಲಯವು ಈ ಮೇಲ್ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಅವರು ವಿಚಾರಣೆಗೆ ಒಳಪಡಲೇ ಬೇಕು. ಅವರು ಕೆಳ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡೆಬೇಕೆ ಅಥವಾ ಬೇಡವೇ ಎಂಬುದನ್ನು ಆ ನ್ಯಾಯಾಲವೇ ನಿರ್ಧಸಿರಿಸಲು ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.

ಭಾಸ್ಕರ್ ರಾವ್ ವಿರುದ್ಧ ಎಸ್‍ಐಟಿ (ವಿಶೇಷ ತನಿಖಾ ತಂಡ) ಕೆಳ ನ್ಯಾಯಾಲಯದಲ್ಲಿ ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಸಂಬಂಧ ಅರ್ಜಿ ಸಲ್ಲಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ರಿಜಾಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದರು.   ಮೇಲ್ಮನವಿ ಅರ್ಜಿ ತಿರಸ್ಕರಿಸಲ್ಪಡುವುದರೊಂದಿಗೆ ರಾವ್ ಅವರಿಗೆ ಸುಪ್ರೀಂಕೋರ್ಟ್‍ನಲ್ಲಿಯೂ ಭಾರೀ ಹಿನ್ನಡೆಯಾಗಿದ್ದು, ವಿಚಾರಣೆಗೆ ಒಳಪಡಲೇಬೇಕಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin