ಸುಪ್ರೀಂಕೋರ್ಟ್‍ನಲ್ಲೇ ಗುಂಡು ಹಾರಿಸಿಕೊಂಡು ಮುಖ್ಯಪೇದೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Police-Suicide

ನವದೆಹಲಿ, ಜ.2- ದೆಹಲಿ ಪೊಲೀಸ್ ಇಲಾಖೆಯ ಮುಖ್ಯಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಪ್ರೀಂಕೋರ್ಟ್ ಅವರಣದಲ್ಲಿ ಇಂದು ನಡೆದಿದೆ.
ಮುಖ್ಯಪೇದೆ ಚಂದ್‍ಪಾಲ್ ಆತ್ಮಹತ್ಯೆಗೆ ಶರಣಾದ ಹೆಡ್‍ಕಾನ್ಸ್‍ಟೆಬಲ್. ಇಂದು ಬೆಳಗ್ಗೆ 8.15ರಲ್ಲಿ ತಮ್ಮ ಸರ್ವಿಸ್ ರಿವಾಲ್ವಾರ್‍ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಸುಪ್ರೀಂಕೋರ್ಟ್‍ನಲ್ಲಿ ಕರ್ತವ್ಯದ ಮೇಲಿದ್ದ ಅವರು ಏಪ್ರಿಲ್ 2014ರಿಂದಲೂ ಸರ್ವೋಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆವರೆಗೆ ಅವರ ಕೆಲಸದ ಸಮಯವಾಗಿತ್ತು. ಇಂದು ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದ ಅವರು ಬೆಳಗ್ಗೆ 8.15ರಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ಚಂದ್‍ಪಾಲ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿಗೆ ಕಾರಣಗಳನ್ನು ತಿಳಿಯಲು ಪೊಲೀಸರು ಅವರ ಕುಟುಂಬದ ಸದಸ್ಯರು ಮತ್ತು ಸಹದ್ಯೋಗಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin