ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಕರವೇ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

turvekere
ತುರುವೇಕೆರೆ, ಸೆ.23-
ಕಾವೇರಿ ಜಲವಿವಾದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಕನ್ನಡ ರಕ್ಷಣಾ ವೇದಿಕೆಯ ಮುಖಂಡರು ಹಾಗೂ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಕರವೇ ತಾಲೂಕು ಅಧ್ಯಕ್ಷ  ಡ್ಯಾನಿಯಲ್ ಮಾತನಾಡಿ, ಕಾವೇರಿಯ ತೀರ್ಪನ್ನು ವಿರೋಧಿಸಿ ರಾಜ್ಯದ ಎಲ್ಲಾ 28 ಸಂಸದರು ಹಾಗೂ ಎಲ್ಲಾ ವಿಧಾನಸಭಾ ಸದಸ್ಯರು ಗಟ್ಟಿ ನಿಲುವನ್ನು ತೆಗೆದುಕೊಂಡು ರಾಜ್ಯದ ರೈತರ, ಜನರ ಹಿತಕ್ಕಾಗಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೇ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಪತ್ರಿಕಾ ಕಾರ್ಯದರ್ಶಿ ಸ್ವರ್ಣಕುಮಾರ್ ಮಾತನಾಡಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರಿಂ ಕೋಟ್ ನಲ್ಲಿ ಪದೇ ಪದೇ ಅನ್ಯಾಯವಾಗುತ್ತಿದೆ. ಅದ್ದರಿಂದ ಪ್ರದಾನ ಮಂತ್ರಿಗಳು ಮದ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗ್ಗೆಹರಿಸಬೇಕು ಎಂದು ಒತ್ತಾಯಿಸಿದರು. ಬೈಕ್ ರ್ಯಾಲಿಯಲ್ಲಿ ತೆರಳಿದ ಕಾರ್ಯಕರ್ತರು ತಹಶೀಲ್ದ್ದಾರ್ ಶಿವಲಿಂಗಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ತಾಲೂಕು ಕಾರ್ಯದರ್ಶಿ ರಂಗಸ್ವಾಮಿ, ಪದಾಧಿಕಾರಿಗಳಾದ ನವೀನ್ ಬಾಬು, ಸತೀಶ್, ಬಸವರಾಜು ಬಾಳೇಕಾಯಿ, ಪುಟ್ಟರಾಜು, ಪ್ರಕಾಶ್, ಸಮೀರ್ ಅಹಮದ್, ಶಿವಣ್ಣ, ಮೋಹನ್ ಕುಮಾರ್, ಕರಿಯಪ್ಪ ಸೇರಿದಂತೆ ಇತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin