ಸುಪ್ರೀಂಕೋರ್ಟ್ ಸಮಗ್ರ ಆಡಳಿತ ವ್ಯವಸ್ಥೆಗೆ ಪ್ರಧಾನಿ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Modi--01

ನವದೆಹಲಿ, ಮೇ 10-ಸುಪ್ರೀಂಕೋಟ್‍ನ ಸಮಗ್ರ ಪ್ರಕರಣ ಆಡಳಿತ ವ್ಯವಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಈ ವ್ಯವಸ್ಥೆಯಿಂದಾಗಿ ಕಕ್ಷಿದಾರರು ಆನ್‍ಲೈನ್ ಮೂಲಕ ತಮ್ಮ ಪ್ರಕರಣದ ಸ್ಥಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಕಾಗದರಹಿತ ವ್ಯವಸ್ಥೆಯತ್ತ ಇದೊಂದು ಪ್ರಮುಖ ಹೆಜ್ಜೆಯಾಗಿದೆ.   ಈ ಸಂದರ್ಭದಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್, ದೇಶದಲ್ಲಿನ ಎಲ್ಲ 24 ಹೈಕೋರ್ಟ್‍ಗಳು ಮತ್ತು ಅಧೀನ ನ್ಯಾಯಾಲಯಗಳಲ್ಲೂ ಇದೇ ಪದ್ದತಿಯನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.ಇದರಿಂದ ಪಾರದರ್ಶಕತೆ ಹೆಚ್ಚಾಗುತ್ತದೆ, ಶೋಷಣೆ ಕಡಿಮೆಯಾಗುತ್ತದೆ ಹಾಗೂ ಕಕ್ಷಿದಾರರಿಗೆ ಅಗಿಂದಾಗ್ಗೆ ತಮ್ಮ ಪ್ರಕರಣಗಳ ಪ್ರಗತಿ ಬಗ್ಗೆ ಮಾಹಿತಿ ಲಭಿಸುತ್ತದೆ ಎಂದು ಸಿಜೆಐ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin