ಸುಪ್ರೀಂನ ಐವರು ನ್ಯಾಯಮೂರ್ತಿಗಳ ಪೀಠದಲ್ಲಿ ಆಧಾರ್ ಗೌಪ್ಯತೆ ಪರಾಮರ್ಶೆ

ಈ ಸುದ್ದಿಯನ್ನು ಶೇರ್ ಮಾಡಿ

Adhaar-Supreme--01

ನವದೆಹಲಿ,ಜು.12- ವಿವಿಧ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳು ಮತ್ತು ಖಾಸಗಿ ಹಕ್ಕು ಸೇರಿದಂತೆ ಆಧಾರ್‍ಗೆ ಸಂಬಂಧಪಟ್ಟಂತೆ ದೇಶದ ಜನತೆಯಲ್ಲಿ ಉದ್ಭವವಾಗಿರುವ ಗೊಂದಲ ನಿವಾರಣೆಗೆ ಜುಲೈ 18 ಮತ್ತು 19ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ಐವರು ನ್ಯಾಯಾಧೀಶರ ಸಂವಿಧಾನ ಪೀಠವನ್ನು ರಚಿಸಿದೆ. ಆಧಾರ್‍ಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಪಂಚ ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕೂಲಂಕಷ ವಿಚಾರಣೆ ನಡೆಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ತಿಳಿಸಿದೆ.

ಸಾರ್ವಜನಿಕ ಕಲ್ಯಾಣ ಕಾರ್ಯ ಕ್ರಮಗಳಿಗೆ ಆಧಾರ್‍ಕಾರ್ಡ್‍ನ್ನು ಕಡ್ಡಾಯಗೊಳಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು  ಕುರಿತು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಇದು ಸಾರ್ವಜನಿಕರಿಗೆ ಸಂಬಂಧಪಟ್ಟ ಮಹತ್ವದ ವಿಷಯವಾದ್ದರಿಂದ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುವ ಅಗತ್ಯವಿದೆ. ಹೀಗಾಗಿ ಮುಂದಿನ ಮಂಗಳವಾರ ಮತ್ತು ಬುಧವಾರ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಸಮಗ್ರವಾಗಿ ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ತಿಳಿಸಿತು. ಅರ್ಟಾನಿ ಜನರಲ್ ಕೆ.ಕೆ.ವೇಣುಗೋಪಾಲ್ ಮತ್ತು ವಕೀಲ ಶಾನ್ ದಿವಾನ್ ಸರ್ಕಾರದ ಪರವಾಗಿ ಕೋರ್ಟ್‍ಗೆ ಹಾಜರಾಗಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin