ಸುಪ್ರೀಂ ಆದೇಶವನ್ನು ಉಲ್ಲಂಘಿಸಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 21 ಬಿಎಂಟಿಸಿ ಬಸ್‍ಗಳು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

BMTC-Bus-01

ಬೆಂಗಳೂರು, ಡಿ.7-ಗುತ್ತಿಗೆ ಆಧಾರದ ಮೇಲೆ ಶಾಲಾ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ 21 ಬಿಎಂಟಿಸಿ ಬಸ್‍ಗಳನ್ನು ಆರ್‍ಟಿಒ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಲ್ಲತ್ತಹಳ್ಳಿ ಆರ್‍ಟಿಒ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಸುಪ್ರೀಂಕೋರ್ಟ್‍ನ ಆದೇಶವನ್ನು ಉಲ್ಲಂಘಿಸಿ ಬಿಎಂಟಿಸಿ ಬಸ್‍ನಲ್ಲಿಯೇ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಶಾಲಾ ವಾಹನಗಳಿಗೆ ಇರಬೇಕಾದ ಯಾವುದೇ ಸುರಕ್ಷಿತ ಮಾನದಂಡಗಳನ್ನು ಅನುಸರಿಸದೆ ಅನಧಿಕೃತವಾಗಿ ಕೈಗೊಂಡ ಈ ಕಾರ್ಯಕ್ಕೆ ಉತ್ತರಿಸುವಂತೆ ಬಿಎಂಟಿಸಿಗೆ ನೋಟಿಸ್ ನೀಡಿದೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಜ್ಞಾನೇಂದ್ರ ಕುಮಾರ್ ತಿಳಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin