ಸುಪ್ರೀಂ ನ್ಯಾಯಾಧೀಶರು, ಸಿಎಂ ಹಾಗೂ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

CM-patil

ಮಂಡ್ಯ, ಸೆ.10-ಕಾವೇರಿ ನೀರು ಸಂಬಂಧಿಸಿದಂತೆ ಮೂವರು ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೇರಿದಂತೆ 9 ಮಂದಿ ವಿರುದ್ಧ ಮಂಡ್ಯ ನಿವಾಸಿ ಎಂ.ಡಿ.ರಾಜಣ್ಣ ಮಂಡ್ಯ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಸಿಎಂ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ 9 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 14ಕ್ಕೆ ಮುಂದೂಡಿದೆ.   ಕಾವೇರಿ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರ ಇಲ್ಲಿನ ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದೆ ಇಡಲು ಸಂಪೂರ್ಣ ವಿಫಲವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin