ಸುವರ್ಣ ಸೌಧದಲ್ಲಿ ನಾಳೆ ಸರ್ಕಾರದ ಚಳಿ ಬಿಡಿಸಲು ಬಿಜೆಪಿ ತಯಾರಿ

ಈ ಸುದ್ದಿಯನ್ನು ಶೇರ್ ಮಾಡಿ

Suvarna-Soudha-0003

ಬೆಳಗಾವಿ, ನ.30- ಕಳೆಗಟ್ಟಿದ್ದ ಕುಂದಾನಗರಿಯ ಚಳಿಗಾದ ಅಧಿವೇಶನ ನಾಳೆಯಿಂದ ರಂಗೇರಲಿದೆ. ಕಳೆದ ಸೋಮವಾರದಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾದ ಚಳಿಗಾಲದ ಅಧಿವೇಶನಕ್ಕೆ ಒಂದು ರೀತಿ ಗರ ಬಡಿದಂತಾಗಿತ್ತು. ಪ್ರಶ್ನೋತ್ತರ, ಚರ್ಚೆ, ಉತ್ತರ ಇಷ್ಟಕ್ಕೆ ಮಾತ್ರ ಸೀಮಿತವಾಗಿತ್ತು. ನಾಳೆಯಿಂದ ಆರಂಭಗೊಳ್ಳಲಿರುವ ಮುಂದುವರೆದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತೊಡೆತಟ್ಟಲು ಬಿಜೆಪಿ ತೀರ್ಮಾನಿಸಿದೆ. ರಾಯಚೂರಿನಲ್ಲಿ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ವೇಳೆ ಮೊಬೈಲ್‍ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪಕ್ಕೆ ಸಿಲುಕಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕಣ ಸಚಿವ ತನ್ವೀರ್‍ಸೇಠ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ನಾಳಿನ ಕಲಾಪದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಮುಂದಾಗಿದೆ.

ಇದರ ಜತೆಗೆ ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು ಸುವ್ಯವಸ್ಥೆ, ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ, ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಮಾಕಳಿ ರವಿ ನಿಗೂಢ ಸಾವು, ಕಾಮಾಕ್ಷಿಪಾಳ್ಯದಲ್ಲಿ ಹತ್ಯೆಯಾದ ಚಿಕ್ಕತಿಮ್ಮೇಗೌಡ ಸೇರಿದಂತೆ ಹಲವು ಪ್ರಕರಣಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಮುಂದಾಗಿದೆ.
ನಿನ್ನೆ ರಾತ್ರಿ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮುಂದಿನ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಪ್ರಮುಖವಾಗಿ ತನ್ವೀರ್‍ಸೇಠ್ ರಾಜೀನಾಮೆಗೆ ಪಟ್ಟು, ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳ ಜತೆ ಶಾಮೀಲಾಗಿರುವವರ ಬಂಧನ, ಪಿಎಫ್‍ಐ, ಕೆಎಫ್‍ಡಿ, ಎಸ್‍ಡಿಪಿಐ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸಬೇಕೆಂದು ಪ್ರತಿಪಕ್ಷ ಒತ್ತಾಯಿಸಲಿದೆ.
ಈಗಾಗಲೇ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಪಿಎಫ್‍ಐ, ಕೆಎಫ್‍ಡಿ ಸೇರಿದಂತೆ ಕೆಲವು ಸಂಘಟನೆಗಳಲ್ಲಿ ಸಕ್ರಿಯಾಗಿರುವುದು ಪೆÇಲೀಸ್ ತನಿಖೆಯಿಂದ ದೃಢಪಟ್ಟಿದೆ.

ಈ ಹಿಂದೆ ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಗಲಭೆಯಲ್ಲಿ ಇದೇ ಸಂಘಟನೆಗಳ ಕೈವಾಡ ಇರುವುದರಿಂದ ಈ ಸಂಘಟನೆಗಳ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಬಿಜೆಪಿ ಆಗ್ರಹಿಸಲಿದೆ. ಅಧಿವೇಶನದ ಪ್ರಾರಂಭದಲ್ಲೇ ಈ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿದರೆ ಉತ್ತರ ಕರ್ನಾಟಕದ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಕಾರಣಕ್ಕಾಗಿ ಹೋರಾಟದಿಂದ ಬಿಜೆಪಿ ಹಿಂದೆ ಸರಿದಿತ್ತು. ಇದೀಗ ಶನಿವಾರ ಅಧಿವೇಶನ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ತನ್ವೀರ್‍ಸೇಠ್, ರುದ್ರೇಶ್‍ಹತ್ಯೆ ಸೇರಿದಂತೆ ಕೆಲವು ವಿಷಯಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ತೀರ್ಮಾನಿಸಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin