ಸೂಕ್ತ ದಾಖಲೆ ಒದಗಿಸಿದರೆ 1.97 ಕೋಟಿ ಹಣ ವಾಪಸ್

ಈ ಸುದ್ದಿಯನ್ನು ಶೇರ್ ಮಾಡಿ

siddarth

ಬೆಂಗಳೂರು, ಅ.22- ವಿಧಾನಸೌಧದ ಪಶ್ಚಿಮದ್ವಾರದ ಬಳಿ ಕಾರಿನಲ್ಲಿ 1.97 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ಸಿದ್ದಾರ್ಥ್ ಎಂಬುವರನ್ನು ವಿಚಾರಣೆಗೆ ಬರಲು ತಿಳಿಸಿದ್ದು, ಸೂಕ್ತ ದಾಖಲೆ ಒದಗಿಸಿದರೆ ಹಣ ಹಿಂದಿರುಗಿಸಲಾಗುವುದು, ಇಲ್ಲದಿದ್ದರೆ ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರುಗಳು, ವಿಧಾನಸೌಧದ ಆವರಣದೊಳಗೆ ಬಂದ ವಕೀಲ ಸಿದ್ಧಾರ್ಥ್ ಹಿರೇಮಠ್ ಅವರ ಕಾರಿನಲ್ಲಿ ದೊರೆತ 1,97, 49,000 ಹಣವನ್ನು ವಶಪಡಿಸಿಕೊಂಡಿದ್ದು, ಹಣದ ಬಗ್ಗೆ ಸೂಕ್ತ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ.

ದಾಖಲೆ ಒದಗಿಸಲು ವಕೀಲರು ಸಮಯಾವಕಾಶ ಕೇಳಿದ್ದಾರೆ. ಸೂಕ್ತ ದಾಖಲೆ ಒದಗಿಸಿದರೆ ಹಣವನ್ನು ಹಿಂದಿರುಗಿಸಲಾಗುವುದು. ಇಲ್ಲದಿದ್ದರೆ ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ನೀಡಲಾಗುವುದು. ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಣ ಎಲ್ಲಿಂದ ಬಂತು, ಎಲ್ಲಿಗೆ ತೆಗೆದು ಕೊಂಡು ಹೋಗುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin