ಸೆ.2 ರಂದು ಬ್ಯಾಂಕ್ ವಹಿವಾಟು ನಡೆಯುವುದಿಲ್ಲ
ನವದೆಹಲಿ ಆ.20-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಸೆ.2 ರಂದು ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರಕ್ಕೆ 5 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಬೆಂಬಲ ಘೋಷಿಸಿದ್ದು, ಸೆ.2 ರಂದು ಬ್ಯಾಂಕ್ ವಹಿವಾಟು ನಡೆಯುವುದಿಲ್ಲ. ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ಈ ಕುರಿತು ಮಾಹಿತಿ ನೀಡಿದ್ದು, ಬ್ಯಾಂಕಿಂಗ್ ಕ್ಷೇತ್ರದ ಮೇಲೆ ದಾಳಿಗಳು ಹೆಚ್ಚಾಗಿವೆ ಎಂದು ದೂರಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಹವರ್ತಿ ಬ್ಯಾಂಕ್ ಗಳನ್ನು ವಿಲೀನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಜನ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
► Follow us on – Facebook / Twitter / Google+
Comments are closed.