ಸೈಕಲ್ ಖರೀದಿಗೆ ನಿಯಮ ಬಾಹಿರವಾಗಿ ಟೆಂಡರ್ : ಲೋಕಾಯುಕ್ತ ಕೋರ್ಟ್’ಗೆ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Lokayukta

ಬೆಂಗಳೂರು, ಫೆ.1- ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲು ಖರೀದಿಸಿರುವ ಸೈಕಲ್‍ಗಳಿಗೆ ನಿಯಮ ಬಾಹಿರವಾಗಿ ಟೆಂಡರ್ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.  ಸರ್ಕಾರದ ವತಿಯಿಂದ ಶಾಲಾ ಮಕ್ಕಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವಿತರಿಸುತ್ತಿರುವ ಸೈಕಲ್ ಖರೀದಿಯಲ್ಲಿ ಭಾರೀ ಮೊತ್ತದ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

2014-15 ಮತ್ತು 2016ನೆ ಸಾಲಿನಲ್ಲಿ ಖರೀದಿಸಲಾದ ಸೈಕಲ್ ಟೆಂಡರ್‍ನಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಲಾಗಿದೆ. 5.2 ಲಕ್ಷ ಸೈಕಲ್ ಅಗತ್ಯವಿದ್ದರೂ 3 ಲಕ್ಷ ಸೈಕಲ್ ವಿತರಣೆ ಸಾಮಥ್ರ್ಯವಿರುವ ಕಂಪೆನಿಗೆ ಗುತ್ತಿಗೆ ನೀಡಲಾಗಿದೆ ಎಂದು ಸಾಯಿದತ್ತ ದೂರು ನೀಡಿದ್ದಾರೆ.  ಐಎಸ್ ಮುದ್ರೆ ಇರಬೇಕೆಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. ಗುಣಮಟ್ಟಕ್ಕೆ ಸಂಬಂಧಿಸಿದ ಅಂಶವನ್ನೇ ಟೆಂಡರ್‍ನಲ್ಲಿ ಕೈಬಿಟ್ಟಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.  ಮೇಲ್ನೋಟಕ್ಕೆ ಇದರಲ್ಲಿ ಭಾರೀ ಪ್ರಮಾಣದ ಗೋಲ್‍ಮಾಲ್ ನಡೆದಿರುವುದರಿಂದ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ದಾಖಲೆಗಳ ಸಮೇತ ದೂರು ಕೊಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin